Homeಮುಖಪುಟಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

- Advertisement -
- Advertisement -

ಅಯೋಧ್ಯೆ ವಿವಾದದಲ್ಲಿ ಪ್ರಮುಖ ದಾವೆದಾರರಲ್ಲಿ ಒಂದಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನೆ ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷ ಜಫರ್ ಅಹ್ಮದ್ ಫರೂಕಿಯವರು ಸುದ್ದಿಗೋಷ್ಠಿ ನಡೆಸಿ “ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ಮಾಡುವ ಮೇಲ್ಮನವಿಯನ್ನು ಸಲ್ಲಿಸದಿರಲು ನಿರ್ಧರಿಸಿದೆ. ಮಂಡಳಿಯು ಸಂಪೂರ್ಣ ವರದಿಯನ್ನು ಕೂಲಂಕಷವಾಗಿ ಓದಿದ ತರುವಾಯ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೇಲ್ಮನವಿ ಸಲ್ಲಿಸದಿರುವುದು ಮಾತ್ರ ಖಚಿತ” ಎಂದು ತಿಳಿಸಿದ್ದಾರೆ.

ಇದಕ್ಕು ಮುನ್ನ, ತೀರ್ಪು ಹೊರಬರುತ್ತಿದ್ದಂತೆಯೇ, ಸುನ್ನಿ ವಕ್ಫ್ ಬೋರ್ಡ್ ಪರ ವಾದ ಮಂಡಿಸಿದ್ದ ಮತ್ತು ಸುನ್ನಿ ವಕ್ಪ್ ಮಂಡಳಿಯ ಸದಸ್ಯರೂ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಕಾರ್ಯದರ್ಶಿಯೂ ಆದ ಜಫರ್ಯಾಬ್ ಜಿಲಾನಿಯವರು ಪತ್ರಿಕಾಗೋಷ್ಠಿಯಲ್ಲಿ “ತೀರ್ಪಿನ ಬಗ್ಗೆ ಗೌರವವಿದೆ, ಆದರೆ ಸಮಾಧಾನ ತಂದಿಲ್ಲ. ಹಾಗಾಗಿ ಮರುಪರಿಶೀಲನೆ ಅರ್ಜಿ ಹಾಕುವ ಬಗ್ಗೆ ಯೋಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು. ಆದರೆ ಫರೂಕಿಯವರ ಹೇಳಿಕೆಯಿಂದ ಮರು ಪರಿಶೀಲನೆ ಅರ್ಜಿ ಸಲ್ಲಿಸಲಾಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಈ ಬಗ್ಗೆ ಜಫರ್ಯಾಬ್ ಜಿಲಾನಿಯವರ ಸ್ಪಷ್ಟಣೆ ಕೇಳಿದಾಗ, “ಮಧ್ಯಾಹ್ನ ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದರ ಕಾರ್ಯದರ್ಶಿಯಾಗಿ ಅಭಿಪ್ರಾಯ ಹೇಳಿದ್ದೆ. ವಕ್ಫ್ ಮಂಡಳಿಯ ಪರವಾಗಿ ಅಲ್ಲ.” ಎಂದರು.
`ಸುನ್ನಿ ವಕ್ಫ್ ಮಂಡಳಿಯಲ್ಲದೆ ನಿರ್ಮೋಹಿ ಅಖಾರ, ಶಿಯಾ ವಕ್ಫ್ ಮಂಡಳಿಗಳೂ ಈ ಪ್ರಕರಣದಲ್ಲಿ ದಾವೆದಾರರಾಗಿದ್ದವು. ಅವು ಮೇಲ್ಮನವಿ ಸಲ್ಲಿಸುತ್ತವೋ, ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ’ ಎಂಬ ಮಾತನ್ನೂ ಫರೂಕಿಯವರು ಹೇಳಿದರು.

ಬೆಳಿಗ್ಗೆ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ 2.7 ಎಕರೆ ಜಾಗವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಬೇಕು, ಈ ಕುರಿತು ಕೇಂದ್ರ ಸರ್ಕಾರ ಒಂದು ಟ್ರಸ್ಟ್ ಸ್ಥಾಪಿಸಬೇಕು. ಮತ್ತು ಇದಕ್ಕೆ ಬದಲಾಗಿ ಅಯೋಧ್ಯೆಯಲ್ಲೇ ಬೇರೆಡೆ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಬೇಕು ಎಂದು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...