Homeಮುಖಪುಟಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

ಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

- Advertisement -
- Advertisement -

ಅತ್ಯಚಾರದಲ್ಲಿ ಭಾಗಿಯಾದ 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಸಾಕ್ಷ್ಯನಾಶ ಮಾಡಿದ ಉಳಿದ ಮೂವರಿಗೆ 5 ವರ್ಷ ಜೈಲು ಸಜೆಯ ಶಿಕ್ಷೆಯನ್ನು ಕೋರ್ಟ್ ಘೋಷಿಸಿದೆ. ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್ ಗೆ ಜೀವಾವಧಿ ಘೋಷಿಸಿದ್ದು, ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಪೊಲೀಸರಿಗೆ 5 ವರ್ಷಗಳ ಜೈಲು ಸಜೆಯನ್ನು ವಿಧಿಸಲಾಗಿದೆ.

ಇಂದು ಬೆಳಿಗ್ಗೆ ಆರೋಪಿಗಳನ್ನು ಘೋಷಿಸಿದ್ದು ಸಂಜೆ 4.45ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಯಿತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂದು ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯರ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋರ್ಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅತ್ಯಾಚಾರ ಆರೋಪಿಗಾಳದ ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್, ತಿಲಕ್ ರಾಜ್, ಸುರೇಂದ್ರ, ಪ್ರವೇಶ್ ದೋಷಿಗಳೆಂದು ಪಠಾಣ್ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ವಿಶಾಲ್ ನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಆಡಳಿತದಲ್ಲಿದ್ದ ಬಿಜೆಪಿ-ಪೀಪಲ್ಸ್ ಡೆಮೊಕ್ರಾಟಿಕ್ ಪಾರ್ಟಿ (ಪಿಡಿಪಿ) ಮೈತ್ರಿಕೂಟದ ನಡುವೆ ಬಿಜೆಪಿ ನಾಯಕರು ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಈ ಇಬ್ಬರು ಆರೋಪಿಗಳ ರಕ್ಷಣೆಗೆ ನಿಂತಿದ್ದರು ಎಂಬುದು ವಿವಾದ ಸಹ ಆಯಿತು ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.

ಅಷ್ಟು ಮಾತ್ರವಲ್ಲದೇ ಸಂತ್ರಸ್ತೆಯ ಪರವಾಗಿ ವಕೀಲಿಕೆ ನಡೆಸಿದ್ದ ದೀಪಿಕಾ ಸಿಂಗ್ ರಾವತ್ ರವರ ಮೇಲೆ ವಕೀಲರ ಸಂಘದ ಅಧ್ಯಕ್ಷರಾದ ಬಿ.ಎಸ್ ಸಲಾತಿಯ ಎಂಬುವವರು ನ್ಯಾಯಾಲಕ್ಕೆ ಹಾಜರಾಗದಂತೆ ಬಹಿರಂಗವಾಗಿ ಬೆದರಿಕೆ ಹಾಕಿದ್ದ ಘಟನೆಯೂ ಸಹ ನಡೆದಿತ್ತು. ಅವರು ಕೇಸಿನಿಂದ ಹಿಂದೆ ಸರಿಯಬೇಕೆಂದು ಹಲವಾರು ಜೀವಬೆದರಿಕೆಯ ಕರೆಗಳು ಸಹ ದೀಪಿಕಾ ಸಿಂಗ್ ರವರಿಗೆ ಬಂದಿದ್ದವು. ತೀವ್ರ ಒತ್ತಡದ ಕಾರಣದಿಂದಾಗಿ ಕೊನೆಗೆ ಅವರು ಕೇಸಿನಿಂದ ಹಿಂದೆ ಸರಿಯಬೇಕಾಗಿತ್ತು.

ದೀಪಿಕಾ ಸಿಂಗ್ ರಾಜಾವತ್

ನಂತರ ಸಂತ್ರಸ್ತೆಯ ಪರವಾಗಿ ಮುಬಿನ್ ಫಾರೂಖಿ ಎಂಬುವವರು ವಕೀಲಿಕೆ ನಡೆಸಿದ್ದರು. ಇಂದು ಈ ಕೇಸಿನಲ್ಲಿ ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಮೂವರು ಪೋಲಿಸರ ಮೇಲೆ ಸಾಕ್ಷ್ಯನಾಶದ ಆರೋಪ ಸಾಬೀತಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...