Homeಕರ್ನಾಟಕಡಿ.ಕೆ.ಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಎಚ್.ಡಿ ಕುಮಾರಸ್ವಾಮಿ

ಡಿ.ಕೆ.ಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಎಚ್.ಡಿ ಕುಮಾರಸ್ವಾಮಿ

ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ ಮತ್ತು ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -
- Advertisement -

ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಕಿಡಿಕಾರಿರುವ ಅವರು ಹಬ್ಬದ ಆಚರಣೆಗೂ ಅವಕಾಶ ನೀಡದೆ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಸಹ ಡಿ.ಕೆ ಶಿವಕುಮಾರ್ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಏಜೆನ್ಸಿಗಳನ್ನು ಬಳಸಿಕೊಂಡು ಪ್ರತಿಪಕ್ಷ ನಾಯಕರನ್ನು ಪ್ರತಿದಿನವೂ ಗುರಿಯಾಗಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರದ ರಚನಾತ್ಮಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವಾಗಿದೆ ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ತಡೆಯುವ ಪ್ರಯತ್ನವಾಗಿದೆ. ಡಿ.ಕೆ.ಶಿವಕುಮಾರ್ ಬಿಜೆಪಿಯ ದ್ವೇಷದ ಪ್ರತೀಕಾರದ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಸಿದ್ದು ಗುಡುಗಿದ್ದಾರೆ.

ಡಿಕೆ ಶಿವಕುಮಾರ್ ಖಂಡಿತವಾಗಿಯೂ ಸ್ವಚ್ಛವಾಗಿ ಹೊರಬರುತ್ತಾರೆ ಮತ್ತು ಇಡೀ ದೇಶವು ಬಿಜೆಪಿಯ ಈ ಕೆಟ್ಟ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುತ್ತದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ ಮತ್ತು ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....