Homeಮುಖಪುಟದೆಹಲಿಯ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರದ ಹೊಸ ಕಾಯಿದೆ

ದೆಹಲಿಯ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರದ ಹೊಸ ಕಾಯಿದೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯನ್ನು ಮಾಲಿನ್ಯ ಮುಕ್ತ ಮತ್ತು ಡೆಂಘೀ ಮುಕ್ತ ಮಾಡಲು ಪಣ ತೊಟ್ಟಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿಯ ಬೀದಿ ಬದಿ ವ್ಯಾಪಾರಿಗಳು, ಮಾರಾಟಗಾರರ ರಕ್ಷಣೆಗೆ ಹೊಸ ಕಾಯಿದೆ ರೂಪಿಸಿದೆ. ನಗರದಿಂದ ಹೊರ ಹಾಕಲಾಗುತ್ತೆ ಎಂಬ ಆತಂಕದಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರಿಗೆ  ಹೊಸ ಕಾಯಿದೆ ರಕ್ಷಣೆ ನೀಡಲಿದೆ. ಐದು ವರ್ಷಗಳ ಸುದೀರ್ಘ ಪ್ರಯತ್ನದ ನಂತರ ಶಾಸನ ಮೊದಲ ಬಾರಿ ಪರಿಚಯಿಸಲ್ಪಟ್ಟಿದೆ.

ಕಾಯಿದೆ ಬಗ್ಗೆ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, `ದೆಹಲಿ ಸರ್ಕಾರ ವರ್ಧಿತ ಪಟ್ಟಣ ಮಾರಾಟ ಸಮಿತಿ (ಟಿವಿಸಿ- ಟೌನ್ ವೆಂಡಿಂಗ್ ಕಮಿಟಿ) ಸರ್ವೇ ನಡೆಸಿತ್ತು. ನಗರದಲ್ಲಿ ಎಷ್ಟು ಮಂದಿ ಬೀದಿಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ಅವರಿಗೆ ವಿತರಣಾ ಪ್ರಮಾಣ ಪತ್ರ ಮತ್ತು ನಿಶ್ಚಿತ ಸ್ಥಳದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ’ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರು ಇಲ್ಲದೇ ನಗರದ ಚಟುವಟಿಕೆಗಳನ್ನು ನಡೆಸುವುದು ಕಷ್ಟ. ಇತರೆ ನಾಗರಿಕರಿಗೆ ತೊಂದರೆಯಾಗದಂತೆ ಚಟುವಟಿಕೆ ನಡೆಸುವಂತೆ ತಿಳಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಾರಾಟಗಾರರು ಪ್ರಾಮಾಣಿಕತೆಯಿಂದ ಬದುಕಲು ಮತ್ತು ಕಾರ್ಯನಿರ್ವಹಿಸಲು ಅನುಕೂಲ ಮಾಡಿ ಕೊಡಲಾಗುವುದು. ಪೊಲೀಸರಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಈ ವರ್ಷಾಂತ್ಯದ ವೇಳೆಗೆ ಲೈಸೆನ್ಸ್ ಕೂಡ ನೀಡಲಾಗುವುದು ಎಂದು ಹೇಳಿದರು.

ಅಂದಹಾಗೇ ಸ್ಟ್ರೀಟ್ ವೆಂಡರ್ಸ್ ಆ್ಯಕ್ಟ್ ನ್ನು 2014ರಲ್ಲಿ ಕಾನೂನುತಜ್ಞರು ಪರಿಚಯಿಸಿದರು. ದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರ ರಕ್ಷಣೆಗೆ ಆ್ಯಕ್ಟ್ ಜಾರಿಗೆ ತಂದಿತು. ಮಾರಾಟಗಾರರಿಗೆ ಕೆಲ ಪ್ರದೇಶಗಳನ್ನು ಪರಿಚಯಿಸಲಾಗಿದೆ. ಟಿವಿಸಿ ಜಾರಿ ಮಾಡಿ, ಲೈಸೆನ್ಸ್ ನೀಡಲಾಗುತ್ತಿದೆ. ಈ ಕ್ರಮದಿಂದ ಜನರ ಬದುಕು, ಭದ್ರತೆ ಸುಧಾರಿಸಲಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...