Homeಸಾಹಿತ್ಯ-ಸಂಸ್ಕೃತಿಕವನಪಬ್ಲಿಕ್ ರಂಗಣ್ಣ ಒಂದು `ಕಂಡ' ಕಾವ್ಯ

ಪಬ್ಲಿಕ್ ರಂಗಣ್ಣ ಒಂದು `ಕಂಡ’ ಕಾವ್ಯ

- Advertisement -
- Advertisement -

ನಂ
ಪಬ್ಲಿಕ್ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ?
ನೆಪ್ತಿ ಇರುಲಿ
ಈ ದ್ಯೇಸದ
ಶತಮಾನುದ ಸತ್ಯುವ
ಮೊದ್ಲು ನುಡುದುದ್ದೆ
ನಂ ರಂಗಣ್ಣ!

ಅತ್ತ ಮೋದಿ ಮಹಾತ್ಮ
ನೋಟು ಬ್ಯಾನು
ಮಾಡುತ್ತಿದ್ದಂಗೆ
ಇತ್ತ ರೊಚ್ಚಿಗೆದ್ದ
ನಂ ರಂಗಣ್ಣ
ಪಬ್ಲಿಕ್ ಮಠದ
ಪೀಠವನೇರಿ,
ಮಾತು ಬಾರದ
ಮುದ್ದು ಸಾದ್ವಿಯ
ಮಗ್ಗುಲಿಗೆ ಎಳಕೊಂಡು
ಮಾಡಿದ್ದೇ ಮಾಡಿದ್ದು….
ಮಾಡಿದ್ದೇ ಮಾಡಿದ್ದು….
….. ಇಶ್ಲೇಷಣೆಯ ಕ್ಲಾಸು!

ಕೈಯಲ್ಲಿ ಪುಡುಗಾಸು
ಹಿಡುದ ಭಾರತ
ಬ್ಯಾಂಕು, ಪೋಸ್ಟಾಪೀಸುಗಳ
ಮುಂದೆ ನಿಂತು
ಟೇಮು ವೇಸ್ಟು
ಮಾಡುವಾಗ,
ಕೋಳ್ಟಿನ ಅಮೀನಣ್ಣ
ಕೂಗಿಕ್ವಂಡಂಗೆ
ನಂ ರಂಗಣ್ಣ
ಮತ್ತೆಮತ್ತೆ
ಅರಚಿಕ್ವಂಡದ್ದು ನೆನಪಿದ್ಯಾ?

`ಎಲ್ಡು ಸಾವುರದ ನೋಟು
ಚಿಪ್ಪು…..!
ಎಲ್ಡು ಸಾವುರದ ನೋಟು
ಚಿಪ್ಪು…..!!
ಎಲ್ಡು ಸಾವುರದ ನೋಟು
ಚಿಪ್ಪು……..!!!

ಅವತ್ತು ನಂ
ರಂಗಣ್ಣುನ್ನ ನೋಡಿ
ಸುಖಾಸುಮ್ಕೆ
ನಗಬಾರದ ಜಾಗದಿಂದೆಲ್ಲ
ಕಿಸಿಕಿಸಿ ಕಿಸಾಡಿದ
ಪುಣ್ಯಾತ್ಮುರೇ,
ಇವತ್ತು
ಮೋದಿ ಮಹಾತ್ಮುನೇ
ಆ ಮಾತುನ್ನ ನಿಜ ಮಾಡ್ಯಿಲ್ವಾ?
`ಎಲ್ಡು ಸಾವುರದ ನೋಟು
ಜನರ ಕೈಗೆ
ತೆಂಗಿನಕಾಯಿ ಚಿಪ್ಪು!!!!!!’

ಇದ್ಕೇನಂತೀರಾ?
ನಂ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ…….

ಹೇಳಿದ ಸತ್ಯುವ
ಅರ್ತ
ಮಾಡ್ಕಣಕ್ಕಾಗುದ
ನಿಜಗೇಡಿಗಳೆ,
ಇನ್ಮೇಕಾದ್ರು
ಸತ್ಯವಂಸುದ
ನಂ ರಂಗಣ್ಣುನ್ನ
ಆಡ್ಕಳಕ್ಕೂ ಮೊದ್ಲು
ಮೈ ಮ್ಯಾಲೆ
ಒಸಿ ಖಬರ್ ಇರುಲಿ
ಹುಸಾರು…..!!!

– ತರ್ಲೆ ನನ್ಮಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...