Homeಸಿನಿಮಾಕ್ರೀಡೆಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

ಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

- Advertisement -
- Advertisement -

ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ವಿಶ್ವಕಪ್‌ನ ಮೊದಲ ಸೆಮಿಫೈನಲ್ಸ್ ಮಳೆಯಿಂದಾಗಿ ತಾತ್ಕಾಲಿಕವಾಗಿ ರದ್ಧಾಗಿದ್ದು ಬುಧವಾರಕ್ಕೆ ಪಂದ್ಯವನ್ನು ಮುಂದೂಡಲಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಸಧ್ಯ 46.1 ಓವರ್‌ಗೆ ತನ್ನ 5 ವಿಕೆಟ್‌ಗಳನ್ನು ಕಳೆದುಕೊಂಡು 211 ರನ್ ಗಳಿಸಿದೆ. ಬಿರುಸಿನ ಆಟಗಾರ ರಾಸ್ ಟೇಲರ್ ಔಟಾಗದೆ 67 ರನ್ ಗಳಿಸಿ ಇನ್ನೂ ಕ್ರೀಸ್‌ನಲ್ಲಿ ಇದ್ದಾರೆ. ಈಗ ಮಳೆಯ ಕಾರಣಕ್ಕೆ ಆಟ ತಾತ್ಕಲಿಕವಾಗಿ ರದ್ಧಾಗಿದ್ದು ಮುಂದಿನ ಸಾಧ್ಯತೆಯ ಕುರಿತು ICC ಹಾಗೂ BCCI ಸರಣಿ ಟ್ವೀಟ್‌ಗಳನ್ನು ಮಾಡಿದೆ. ಅವರ ಪ್ರಕಾರ ಪಂದ್ಯ ಎಲ್ಲಿಗೆ ನಿಂತಿದ್ದೆಯೋ ಅಲ್ಲಿಂದಲೇ ಬುಧವಾರ ಮುಂದುವರೆಯಲಿದೆ.

 

ICC ಪ್ರಕಾರ ಈ ಪಂದ್ಯದ ಫಲಿತಾಂಶ ಪ್ರಕಟವಾಗುವುದು ಬಹಳ ಮುಖ್ಯವಾಗಿದ್ದು, ಫಲಿತಾಂಶ ಪ್ರಕಟವಾಗಲೇಬೇಕಾದರೆ ಭಾರತ ಕನಿಷ್ಠ 20 ಓವರ್‌ಗಳ ಪಂದ್ಯವನ್ನು ಆಡಲೇಬೇಕಿದೆ. ಹಾಗೊಂದು ವೇಳೆ ಎರಡನೇ ದಿನವೂ ಮಳೆ ಬಂದು ಒಂದೂ ಬಾಲ್ ಆಡಲು ಸಾಧ್ಯವಾಗಿಲ್ಲ ಎಂದಾದರೆ ಭಾರತವನ್ನು ಫೈನಲ್‌ಗೆ ಕಳಿಸಬಹುದಾಗಿದೆ. (ಈ ಸಾಧ್ಯತೆ ಬಹಳ ಕಡಿಮೆ) ಇದರ ಹೊರತಾಗಿ ಇರುವ ಬೇರೆ ಸಾಧ್ಯತೆಗಳು ಹೀಗಿವೆ.

  1. ಬುಧವಾರ ಮಳೆ ಬಾರದಿದ್ದರೆ ನ್ಯೂಝಿಲೆಂಡ್ ತಂಡ ಮತ್ತೆ ತಾನು ನಿಲ್ಲಿಸಿದ 211/5 (46.1) ರಿಂದ ಶುರು ಮಾಡಬೇಕಿರುತ್ತದೆ‌.
  2. ಬುಧವಾರವೂ ನ್ಯೂಝಿಲೆಂಡ್ ಬ್ಯಾಟ್ ಮಾಡದೇ ಇದ್ದರೆ DLS ಪ್ರಕಾರ ಪಂದ್ಯವನ್ನು 46 ಓವರ್‌ಗೆ ಸೀಮಿತಗೊಳಿಸಿ ಭಾರತಕ್ಕೆ 237 ರನ್ ನ ಗುರಿ ನೀಡಲಾಗುತ್ತದೆ. ಅಥವಾ
  3. ಪಂದ್ಯವನ್ನು 20 ಓವರ್‌ಗೆ ಇಳಿಸಿ 148 ರನ್ ಪೂರ್ಣಗೊಳಿಸುವ ಗುರಿಯನ್ನು ಭಾರತಕ್ಕೆ ನೀಡಲಾಗುತ್ತದೆ.

ನಾಳಿನ ಪಂದ್ಯಕ್ಕೂ ಪ್ರಕ್ಷಕರು ಅದೇ ಟಿಕೆಟ್‌ನಿಂದ ಕ್ರೀಡಾಂಗಣ ಪ್ರವೇಶ ಮಾಡಬಹುದು ಆದರೆ ಅದನ್ನು ಬೇರೆಯವರಿಗೆ ಮಾರಾಟ/ಹಸ್ತಾಂತರ ಮಾಡಲು ಸಾಧ್ಯವಿಲ್ಲ ಎಂದು ICC ತಿಳಿಸಿದೆ‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...