Homeಮುಖಪುಟಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಕೊನೆಗೂ ಸಿಕ್ಕಿತು ಜಾಮೀನು

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಕೊನೆಗೂ ಸಿಕ್ಕಿತು ಜಾಮೀನು

ಪಿ.ಚಿದಂಬರಂ ತಮ್ಮ ಪಾಸ್ ಪೋರ್ಟನ್ನು ಕೋರ್ಟಿಗೆ ಒಪ್ಪಿಸಬೇಕು ಮತ್ತು ಪೂರ್ವಾನುಮತಿಯಿಲ್ಲದೇ ದೇಶ ಬಿಟ್ಟು ಹೋಗುವ ಹಾಗಿಲ್ಲ ಎಂದು ಆದೇಶ ನೀಡಿದೆ.

- Advertisement -
- Advertisement -

ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಇಂದು ಸುಪ್ರೀಂಕೋರ್ಟು ಐಎನ್ಎಕ್ಸ್ ಮೀಡಿಯಾ ಕೇಸಿನಲ್ಲಿ ಜಾಮೀನು ಮಂಜೂರು ಮಾಡಿದೆ. ಕಳೆದ 105 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಚಿದಂಬರಂ ಅವರು ‘ಓಡಿ ಹೋಗುವ ಸಾಧ್ಯತೆ’ ಇಲ್ಲದಿರುವುದರಿಂದ ಮತ್ತು ಜೈಲಿನಲ್ಲಿ ಕಳೆದ ದಿನಗಳಲ್ಲಿ ಈಗಾಗಲೇ ಎರಡು ಬಾರಿ ಅನಾರೋಗ್ಯಕ್ಕೆ ಗುರಿಯಾಗಿ, ಚಿಕಿತ್ಸೆ ಪಡೆಯುತ್ತಿರುವುದಿರಂದ ಅವರು ಜಾಮೀನು ಪಡೆಯಲು ಅರ್ಹರು ಎಂದು ನ್ಯಾಯಮೂರ್ತಿ ಭಾನುಮತಿ ಅವರ ನೇತೃತ್ವದ, ನ್ಯಾಹೃಷಿಕೇಷ್ ರಾಯ್ ಮತ್ತು ನ್ಯಾ.ಎ.ಎಸ್.ಬೋಪಣ್ಣ ಅವರಿರುವ ನ್ಯಾಯಪೀಠ ಭಾವಿಸಿದೆ.

ಆದರೆ ಇದೇ ಪ್ರಕರಣದ ಇತರ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲವೆಂದು ಹೇಳಿರುವ ಪೀಠ, ಪಿ.ಚಿದಂಬರಂ ತಮ್ಮ ಪಾಸ್ ಪೋರ್ಟನ್ನು ಕೋರ್ಟಿಗೆ ಒಪ್ಪಿಸಬೇಕು ಮತ್ತು ಪೂರ್ವಾನುಮತಿಯಿಲ್ಲದೇ ದೇಶ ಬಿಟ್ಟು ಹೋಗುವ ಹಾಗಿಲ್ಲ ಎಂದು ಆದೇಶ ನೀಡಿದೆ.

75 ವರ್ಷ ವಯಸ್ಸಿನ ಹಿರಿಯ ಕಾಂಗ್ರೆಸ್ ನಾಯಕ ಚಿದಂಬರಂರ ಮೇಲೆ ಈ ಮೊಕದ್ದಮೆಯನ್ನು ಸಿಬಿಐ ಮೇ 15, 2017ರಂದು ದಾಖಲಿಸಿತ್ತು. ಆಗಸ್ಟ್ 21, 2019ರಲ್ಲಿ ಬಂಧಿಸಿದ ನಂತರ ಚಿದಂಬರಂ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 22ರಂದು ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ, ಸಂಬಂಧಿತ ಇನ್ನೊಂದು ಕೇಸಿನಲ್ಲಿ ಇಡಿ ಕಸ್ಟಡಿಗೆ ತೆಗೆದುಕೊಂಡಿತ್ತು.

ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿಯವರು ಚಿದಂಬರಂ 10 ಲಕ್ಷ ರೂ ಲಂಚ ಪಡೆದಿದ್ದಾರೆಂದು ಹೇಳಿದ್ದರಿಂದ ಈ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಆ ಕಾರಣದಿಂದಲೇ ಇದು ಸುಳ್ಳು ಮೊಕದ್ದಮೆಯೆಂದು ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳು ಆರೋಪಿಸಿದ್ದವು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಬಂಧಿತ ಆರೋಪಿಯನ್ನು ಜೈಲಿನಲ್ಲಿ ಭೇಟಿಯಾಗಿದ್ದರು.
ಇದೀಗ ಕಾಂಗ್ರೆಸ್ಸಿನ ಪ್ರಮುಖ ನಾಯಕನಿಗೆ ತಾತ್ಕಾಲಿಕ ಬಿಡುಗಡೆ ಸಿಕ್ಕಿದಂತಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...