Homeಮುಖಪುಟಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ...’

ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ…’

- Advertisement -
- Advertisement -

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಢಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‌ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‌ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

`ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ’ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‌ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಅವರು, ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು’ ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.

ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ ಎಂದಿರುವ ಅಗರ್ವಾಲ್ ಇದಕ್ಕೆ ಸಾಕ್ಷಿಯಾಗಿ ಸಂಘ ಪರಿವಾರದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, `300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‌ಬರೇಲಿಯಲ್ಲಿ ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.

ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ.  ಅದ್ವಾನಿಯವರನ್ನು  ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಯಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‌ವಾಲ್ ಹೇಳಿದ್ದಾರೆ.

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ’ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‌ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.

(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...