Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...