Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...