Homeಮುಖಪುಟಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...