Homeಮುಖಪುಟಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

ಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

- Advertisement -
- Advertisement -

ಮೊನ್ನೆಯಷ್ಟೇ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಷ್ಠಿತ ಗೌರವದ ಪ್ರಶಸ್ತಿಗಳನ್ನು ನೀಡಿ ಹಲವರನ್ನು ಗೌರವಿಸಿದೆ. ಅದರಲ್ಲಿ ಇಡೀ ದೇಶದ ಗಮನ ಸೆಳೆದದ್ದು ಸಿನಿಮಾ ಕ್ಷೇತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವುದು. ಅಂದಹಾಗೆ ಕಂಗನಾ ಇತ್ತೀಚೆಗಷ್ಟೇ ಸಿನಿಮಾ ಇಂಡಸ್ಟ್ರಿಗೆ ಬಂದವರು. ಅಂತಹ ಗಮನಾರ್ಹವಾದ, ವಿಭಿನ್ನವಾದ ಸಿನಿಮಾಗಳನ್ನೇನೂ ಆಕೆ ಮಾಡಿಲ್ಲ. ನಟಿಸಿರುವುದು ಸುಮಾರು 34 ಸಿನಿಮಾಗಳಷ್ಟೇ. ಹಾಗೆ ನೋಡಿದರೆ ನೂರಾರು ಸಿನಿಮಾಗಳನ್ನು ಮಾಡಿ, ಸಿನಿಮಾರಂಗಕ್ಕೆ ಮೆರಗು ತಂದುಕೊಟ್ಟು, ತಮ್ಮದೇ ಆದ ಛಾಪು ಮೂಡಿಸಿರುವ ಹಲವಾರು ಸ್ಟಾರ್‍ಗಳು ಇನ್ನೂ ನಮ್ಮ ಮಧ್ಯದಲ್ಲೇ ಇದ್ದಾರೆ. ಕೆಲವರು ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರಾರಿಗೂ ಸಿಗದ ಪದ್ಮಶ್ರೀ ಪ್ರಶಸ್ತಿ ಕಂಗನಾಗೆ ಮಾತ್ರ ಏಕೆ ಎಂಬುದು ಸಿನಿ ಅಭಿಮಾನಿಗಳಿಂದ ಹಿಡಿದು ಹಲವರ ಪ್ರಶ್ನೆ. ಇಂತಹ ಪ್ರಶ್ನೆಗಳಿಗೆ ಉತ್ತರವೂ ನಮ್ಮೆದುರಿಗೇ ಇದೆ. ಇತ್ತೀಚೆಗೆ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಸಂಘಿ ಭಯೋತ್ಪಾದಕರು ನಡೆಸಿದ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದೀಪಿಕಾ ಭಾಗವಹಿಸಿದ್ದರು. ಕಪ್ಪುಡುಗೆ ಧರಿಸಿ ಏನು ಮಾತನಾಡದೆ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದಿದ್ದ ದೀಪಿಕಾ ಮೌನವಾಗಿಯೇ ದೇಶಕ್ಕೆ ಸಂದೇಶ ರವಾನಿಸಿದ್ದರು. ಇದೇ ವಿಚಾರವಾಗಿ ಸಂದರ್ಶನವೊಂದರಲ್ಲಿ ಕಂಗನಾಗೆ ದೀಪಿಕಾ ನಡೆಯ ಬಗ್ಗೆ ಕೇಳಿದ್ದ ಪ್ರಶ್ನೆಗೆ ದೀಪಿಕಾ ಬಗ್ಗೆ ನಾನೇನು ಹೇಳುವುದಿಲ್ಲ. ಆದರೆ ತುಕಡೆ ಗ್ಯಾಂಗ್ ಜೊತೆ ನಾನು ಹೋಗಿನಿಲ್ಲುವುದಿಲ್ಲ, ಅವರನ್ನು ನಾನು ವಿರೋಧಿಸುತ್ತೇನೆ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯೊಂದೇ ಸಾಕಾಗಿತ್ತು ಆಕೆ ಕೇಂದ್ರದ ಕೃಪಾಕಟಾಕ್ಷಕ್ಕೆ ಪಾತ್ರರಾಗಲು. ಅಂದಹಾಗೆ ಕಂಗನಾಗೆ ಆ ಮುಂಚೆ ಮತ್ತೊಂದು ಮಾಹಿತಿ ಗೊತ್ತಿರಲಿಲ್ಲ. ಕೇಂದ್ರ ಗೃಹಸಚಿವಾಲಯ ದೇಶದಲ್ಲಿ ಯಾವುದೇ ತುಕಡೇ ಗ್ಯಾಂಗ್‍ಗಳು ಇಲ್ಲವೆಂದು ಹೇಳುತ್ತದೆಂದು. ಏನೇ ಇರಲಿ ತುಕಡೇ ಗ್ಯಾಂಗ್ ಎಂಬ ಒಂದು ಪದದ ಉಚ್ಚಾರ ಕಂಗನಾರ ಜೀವಮಾನದ ಗಮನಾರ್ಹ ಸಾಧನೆಯಾಗಿ ಪರಿಣಮಿಸಿ ಪದ್ಮಶ್ರೀ ಒಲಿಯುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...