HomeUncategorizedಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ: ಮಾಜಿ ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ: ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮತ್ತೆ ಭುಗಿಲೆದ್ದಿರುವ ಹಿಂದಿ ಹೇರಿಕೆಯ ವಿರುದ್ಧದ ದಕ್ಷಿಣ ಭಾರತ ರಾಜ್ಯಗಳ ಹೋರಾಟಕ್ಕೆ ಇಂದು ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಸಹ ದನಿಗೂಡಿಸಿದ್ದಾರೆ.

“ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.

ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದೆ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ.

ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ.” ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.
#StopHindiImposition

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...