Homeಸಿನಿಮಾಸಿನಿ ಸುದ್ದಿಕಲರ್ಸ್ `ಕಿನ್ನರಿ'ಯ ಅರೆಸ್ಟ್ ರಾದ್ಧಾಂತ

ಕಲರ್ಸ್ `ಕಿನ್ನರಿ’ಯ ಅರೆಸ್ಟ್ ರಾದ್ಧಾಂತ

- Advertisement -
- Advertisement -

ಕಲರ್ಸ್ ಕನ್ನಡ ಚಾನೆಲ್‍ಗೂ ಪೊಲೀಸ್ ಕೇಸಿಗೂ ಅದೇನು ಬಾಂಧವ್ಯವೋ ಗೊತ್ತಿಲ್ಲ. ಹಿಂದೆ ಈ ಚಾನೆಲ್‍ನ ಪ್ರೊಡಕ್ಟ್‍ಗಳಾದ ಬಿಗ್‍ಬಾಸ್ ಪ್ರಥಮ್, ಭುವನ್ ಪರಸ್ಪರ `ಕಚ್ಚಾಡಿ’ಕೊಂಡು ಪೊಲೀಸ್ ಠಾಣೆ ಹೊಕ್ಕಿ ಬಂದಿದ್ದರು. ಅದಕ್ಕೂ ಮೊದಲು ಇದೇ ಚಾನೆಲ್‍ನ ಪುಟ್ಟಗೌರಿ ಮದುವೆಯ ಹೀರೊ ಮಹೇಶ್ ಪಾತ್ರಧಾರಿ ಕೂಡಾ ಕುಡಿದು ಡ್ರೈವಿಂಗ್ ಮಾಡಿದ ರಾದ್ಧಾಂತದಲ್ಲಿ ಪೊಲೀಸರ ಅತಿಥಿಯಾಗಿ ಸುದ್ದಿಯಾಗಿದ್ದ. ಇನ್ನು ಆ ಚಾನೆಲ್‍ನ ಹೆಮ್ಮೆಯ ಕೊಡುಗೆ ಹುಚ್ಚಾ ವೆಂಕಟ್ ವಿವಾದ ಹುಟ್ಟುಹಾಕೋದರಲ್ಲಿ ಎತ್ತಿದ ಕೈ. ಇದೀಗ ಕಲರ್ಸ್ ಕನ್ನಡದ ಮತ್ತೊಂದು ಪ್ರತಿಭೆ(!) ಜೈಲು ಸೇರಿ ಚಲಾವಣೆಗೆ ಬಂದಿದೆ. ಈ ವಾಹಿನಿಯಲ್ಲಿ ಪ್ರಸಾರವಾಗೋ `ಕಿನ್ನರಿ’ ಸೀರಿಯಲ್‍ನ ಹೀರೊ ಕಿರಣ್ ರಾಜ್‍ನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಅಂತ ಮಾಡೆಲ್ ಯಾಸ್ಮಿನ್ ಪಠಾಣ್ ಕಂಫ್ಲೆಂಟೇ ಅವನಿಗೆ ಜೈಲುದಾರಿ ತೋರಿಸಿದೆ. ಅಷ್ಟಕ್ಕೂ ಈ ಯಾಸ್ಮಿನ್ ಬೇರೆಯಾರೂ ಅಲ್ಲ, ಕಿರಣ್ ರಾಜ್ ಜತೆ ಕಳೆದ ಐದು ವರ್ಷಗಳಿಂದ ಲಿವಿಂಗ್ ಟು ಗೆದರ್ ರಿಲೇಶನ್‍ಶಿಪ್‍ನಲ್ಲಿದ್ದಾಕೆ. ಆದರೆ ಇದಕ್ಕೆ ಪ್ರತಿಯಾಗಿ, ತಮ್ಮ ತಂದೆ ಹಾಗೂ ತಾಯಿ ಮೇಲೆ ಯಾಸ್ಮಿನ್‍ಳೇ ಹಲ್ಲೆ ಮಾಡಿದ್ದಾಳೆ ಅಂತ ಕಿರಣ್‍ರಾಜ್ ಕೂಡ ದೂರು ನೀಡಿದ್ದಾನೆ. ಪಾಪಾ, ಈ ಪರ್ಸನಲ್ ಕಾದಾಟದಲ್ಲಿ ಕಲರ್ಸ್ ಕನ್ನಡ ಚಾನೆಲ್ ಹೆಸರು ಮತ್ತೊಮ್ಮೆ ಬೀದಿಗೆ ಬಿದ್ದಂತಾಗಿದೆ. ಸೋ… ಸ್ಯಾಡ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...