Homeಕರ್ನಾಟಕಕೆ.ಆರ್‌ ಪೇಟೆಯಲ್ಲಿ ಸೋಲು. 13 ಕ್ಷೇತ್ರಗಳಲ್ಲಿ ಹಿನ್ನಡೆ ಕಂಡ ಜೆಡಿಎಸ್‌... ಯಶವಂತಪುರದಲ್ಲಿ ಮಾಡು ಇಲ್ಲವೇ ಮಡಿ...

ಕೆ.ಆರ್‌ ಪೇಟೆಯಲ್ಲಿ ಸೋಲು. 13 ಕ್ಷೇತ್ರಗಳಲ್ಲಿ ಹಿನ್ನಡೆ ಕಂಡ ಜೆಡಿಎಸ್‌… ಯಶವಂತಪುರದಲ್ಲಿ ಮಾಡು ಇಲ್ಲವೇ ಮಡಿ ಹೋರಾಟ

- Advertisement -
- Advertisement -

ಸ್ಪರ್ಧಿಸಿದ್ದ 14 ಕ್ಷೇತ್ರಗಳಲ್ಲಿ ಕೆ.ಆರ್‌ ಪೇಟೆಯಲ್ಲಿ ಸೋತ ಜೆಡಿಎಸ್‌ 13 ಕ್ಷೇತ್ರಗಳಲ್ಲಿ ಜೆಡಿಎಸ್‌ ಹಿನ್ನಡೆ ಅನುಭವಿಸಿದೆ. ಯಶವಂತಪುರದಲ್ಲಿ ಮಾತ್ರ ಮಾಡು ಇಲ್ಲವೇ ಮಡಿ ಹೋರಾಟ ನಡೆಸುತ್ತಿದೆ.

ಜೆಡಿಎಸ್‌ನ ಭದ್ರಕೋಟೆಯಲ್ಲಿ ಛಿದ್ರ ಮಾಡಿರುವ ಬಿಜೆಪಿ ಅನರ್ಹ ಶಾಸಕ ನಾರಾಯಣಗೌಡರನ್ನು ಗೆಲ್ಲಿಸಿದೆ. ಆ ಮೂಲಕ ಜೆಡಿಎಸ್‌ ತೀವ್ರ ಮುಖಭಂಗ ಕಂಡಿದೆ.

ಯಶವಂತಪುರದಲ್ಲಿ ಆರಂಭದಿಂದ ಮುನ್ನಡೆ ಕಂಡಿದ್ದ ಜೆಡಿಎಸ್‌ ಅಭ್ಯರ್ಥಿ ಜವರಾಯಿಗೌಡ 8 ಮತ್ತು 9 ಸುತ್ತಿನಲ್ಲಿ ಸ್ವಲ್ಪ ಹಿನ್ನಡೆ ಕಂಡಿದ್ದರು. ಆದರೆ ಮತ್ತೆ 10ನೇ ಸುತ್ತಿನಲ್ಲಿ ಮುನ್ನಡೆ ಸಾಧಿಸುವ ಮೂಲಕ ಹಾವು ಏಣಿ ಆಟಕ್ಕೆ ಸಾಕ್ಷಿಯಾಗಿದೆ.

ಬಿಜೆಪಿಯ ಅನರ್ಹ ಶಾಸಕ ಎಸ್‌.ಟಿ ಸೋಮಶೇಖರ್‌ ಕೂಡ ಪ್ರಬಲ ಪೈಪೋಟಿ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಬಹಳಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಅವರು ಈ ಬಾರಿ ತಿಣುಕಾಡುತ್ತಿದ್ದಾರೆ,

ಇನ್ನು ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೆಪ ಮಾತ್ರಕ್ಕೆ ಅಭ್ಯರ್ಥಿಯಂತಾಗಿದೆ. ಇಲ್ಲಿ ಕಾಂಗ್ರೆಸ್‌ ಪರೋಕ್ಷವಾಗಿ ಜೆಡಿಎಸ್‌ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...