Homeಮುಖಪುಟಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

ಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

- Advertisement -
- Advertisement -

| ರಮಾನಂದ ಅಂಕೋಲ |

ವಿಶ್ವಬ್ಯಾಂಕ್‌ನ ಮುಖ್ಯ ಆರ್ಥಿಕ ತಜ್ಞ ಮತ್ತು ಭಾರತ ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರ ಕೌಶಿಕ್ ಬಸುರವರು ನಿರುದ್ಯೋಗದ ಸಮಸ್ಯೆಯ ಬಗ್ಗೆ ಭಾರತದ ಕೇಂದ್ರ ಸರ್ಕಾರ ಸಮರ್ಪಕವಾಗಿ ಗಮನ ನೀಡಿಲ್ಲದಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ ಎಂದು ತಮ್ಮ ನ್ಯೂಯಾರ್ಕ ಟೈಮ್ಸ್ ಪತ್ರಿಕೆಗೆ ಬರೆದ ಅಂಕಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನರೆಂದ್ರ ಮೋದಿ ಸರ್ಕಾರವು ಕೆಲವೇ ಜನರ ಬೃಹತ್ ಉದ್ಯಮದತ್ತ ಗಮನ ಹರಿಸಿದೆಯೇ ಹೊರತು ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಹಾಗೂ ಕೃಷಿ ಕ್ಷೇತ್ರದಲ್ಲಿ ಸೃಷ್ಟಿಸಬಹುದಾಗಿದ್ದ ಉದ್ಯೋಗಗಳ ಬಗ್ಗೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ನರೆಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರವು ಅಧಿಕೃತವಾದ ಸರ್ಕಾರಿ ಅಂಕಿ-ಅಂಶಗಳನ್ನು ಮುಚ್ಚಿಟ್ಟ ಕಾರಣ ಭಾರತದಲ್ಲಿ ನಿರುದ್ಯೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಆರ್ಥಿಕ ತಜ್ಞರು ಖಾಸಗಿ ಮತ್ತು ಪರೋಕ್ಷ ಮೂಲಗಳನ್ನು ಅವಲಂಬಿಸಬೇಕಾಗಿದೆ ಎಂದು ತಮ್ಮ ಅಂಕಣದಲ್ಲಿ ದೂರಿದ್ದಾರೆ.

ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಹೇಳಿದಂತೆ ನೋಟು ನಿಷೇಧದ ನಂತರ ಒಂದು ವರ್ಷದ ಅವಧಿಯಲ್ಲಿ (2017-2018) ದಾಖಲಾದ 6.1% ರಷ್ಟು ನಿರುದ್ಯೋಗ ದರದ ಪ್ರಮಾಣ ಕಳೆದ ೪೫ ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ನಿರುದ್ಯೋಗಕ್ಕೆ ಸಂಬಂಧಿಸಿದ ವರದಿಯನ್ನು ಸಿದ್ದಪಡಿಸಿದ್ದ ಕೇಂದ್ರ ಸಾಂಖ್ಯಿಕ ಆಯೋಗದ ಇಬ್ಬರು ಸ್ವತಂತ್ರ ಸದಸ್ಯರು ಸಕಾರ ಈ ಮಾಹಿತಿಯನ್ನು ಪ್ರಕಟಿಸಲು ತಡೆಹಿಡಿದ ಕಾರಣಕ್ಕೆ ರಾಜೀನಾಮೆ ನೀಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಸಾಂಖ್ಯಿಕವಾದ ದತ್ತಾಂಶ ಸಂಗ್ರಹಣೆಯಲ್ಲಿ ಜಾಗತಿಕವಾಗಿ ಪ್ರಶಂಸೆಗೆ ಪಾತ್ರವಾಗಿದ್ದ ಸಂಸ್ಥೆಯೊಂದು ಸಿದ್ದಪಡಿಸಿದ್ದ ವರದಿಯನ್ನು ಮುಚ್ಚಿಟ್ಟಿರುವುದು ಭಾರತದ ಮಟಿಗೆ ಅಸಾಧರಣವಾದುದು. ಸರ್ಕಾರಿ ದತ್ತಾಂಶದ ಅನುಪಸ್ಥಿತಿಯಲ್ಲಿ ಸೆಂಟರ್ ಫಾರ್ ಮಾನಿಟರಿಂಗ್ ಆಫ್ ಇಂಡಿಯನ್ ಎಕಾನಮಿ ಮತ್ತು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯ ಸಂಶೋಧನಾ ವರದಿಗಳು ಭಾರತದಲ್ಲಿನ ನಿರುದ್ಯೋಗದ ಭೀಕರತೆಯ ಬಗ್ಗೆ ಮಾಹಿತಿ ಚೆಲ್ಲುತ್ತಿವೆ ಎಂದಿದ್ದಾರೆ.

ಈ ನಿರುದ್ಯೋಗದ ಭೀಕರತೆ ಆಕಸ್ಮಿಕವೇನಲ್ಲ. ದೇಶದ ಆರ್ಥಿಕತೆಯ ಹಳಿ ತಪ್ಪಿಸಿದ ನೋಟು ನಿಷೇಧ ಮತ್ತು ಜಿ.ಎಸ್.ಟಿ ಯ ಅಸಮರ್ಪಕ ಜಾರಿಯ ಉತ್ಪನ್ನ ಇದು ಕೌಶಿಕ್ ಬಸು ತಮ್ಮ ಲೇಖನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೃಪೆ: ಸ್ಕ್ರೋಲ್.ಇನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...