Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...