Homeಕರ್ನಾಟಕದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಹಾದ್ರಿಪುರ ಗ್ರಾಮ ಪಂಚಾಯಿತಿಯಲ್ಲಿ 'ಪ್ರಗತಿ ಕಾಲೋನಿ ಯೋಜನೆ' ಗೋಲ್‌ಮಾಲ್‌

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯ ‘ಪ್ರಗತಿ ಕಾಲೋನಿ’ ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯಿತಿಯ ಹಾದ್ರಿಪುರ ಗ್ರಾಮದಲ್ಲಿ ನಡೆದಿದೆ.

ಜನವಸತಿ ಪ್ರದೇಶದಿಂದ ಸುಮಾರು ಒಂದು ಕಿ.ಮಿ. ದೂರದಲ್ಲಿರುವ ಗ್ರಾಮ ಪಂಚಾಯಿತಿ ಮುಂದೆಯೇ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಯೋಜನೆ ದುರ್ಬಳಕೆಯಾಗುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ದಲಿತರ ಕೇರಿಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ರಸ್ತೆಯಲ್ಲಿ ಕಾಮಗಾರಿ ನಡೆಸುವ ಮೂಲಕ ಪರಿಶಿಷ್ಟರಿಗೆ ಮೀಸಲಿಟ್ಟ ಹಣದ ದುರ್ಬಳಕೆ ಆಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈಗಾಗಲೇ ಕಾಮಗಾರಿ ಮುಗಿದಿದ್ದು, ರಸ್ತೆ ನಿರ್ವಹಣೆಗಾಗಿ ಸ್ಥಳೀಯ ಪಂಚಾಯಿತಿಗೆ ಹಸ್ತಾಂತರವಾಗಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಬಡಾವಣೆಗಳು/ಕಾಲೋನಿಗಳ ಅಭಿವೃದ್ಧಿಗಾಗಿ ‘ಪ್ರಗತಿ ಕಾಲೋನಿ’ ಹೆಸರಿನಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಹಾದ್ರಿಪುರ ಗ್ರಾಮದಲ್ಲಿ ಜನವಸತಿಯೇ ಇಲ್ಲದ ಜಾಗದಲ್ಲಿ ನಿರ್ಮಾಣವಾಗಿರುವ ಸಿಸಿ ರಸ್ತೆ ಕಾಮಗಾರಿ

ಜೂನ್‌.8 ರಂದು ದೊಡ್ಡಬಳ್ಳಾಪುರ ಶಾಕಸ ಧೀರಜ್ ಮುನಿರಾಜು ಅವರು ಗುದ್ದಲಿ ಪೂಜೆ ನೆರವೇರಿಸಿ, ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿ ಮುಗಿದಿದ್ದು, ಸಿಸಿ ರಸ್ತೆ ನಿರ್ಮಾಣ ಮಾಡಿರುವ ಜಾಗದಲ್ಲಿ ಜನವಸತಿಯೇ ಇಲ್ಲ ಎಂಬುದು ಅಚ್ಚರಿಯ ವಿಷಯವಾಗಿದೆ. ಇದೀಗ ಕಾಮಗಾರಿ ನಡೆಸಿರುವ ಜಾಗದಿಂದ ದಕ್ಷಿಣಕ್ಕೆ ಸುಮಾರು ಒಂದು ಕಿ.ಮಿ. ದೂರದಲ್ಲಿ ಹಾದ್ರಿಪುರ ಗ್ರಾಮವಿದೆ; ಉತ್ತರಕ್ಕೆ ಹಾದ್ರಿಪುರ ಗ್ರಾಮದ ಕಾಲೋನಿ ಇದೆ. ಕಾಮಗಾರಿ ಮುಗಿದಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಫಲಕ ಅಳವಡಿಸಲಾಗಿದ್ದು, “ಹಾದ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದ್ರಿಪುರ ಪರಿಶಿಷ್ಟ ಜಾತಿ ಜನವಸತಿ ಕಾಲೋನಿಗೆ ಸಿ.ಸಿ. ರಸ್ತೆ ಅಭಿವೃದ್ಧಿ ಕಾಮಗಾರಿ” ಎಂದು ಬರೆಯಲಾಗಿದೆ.

ಜೂನ್ 8 ರಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದರು.

ದಲಿತರ ಕೇರಿಯಲ್ಲಿಲ್ಲ ಚರಂಡಿ! ಜೆಜೆಎಂ ಕಾಮಗಾರಿಯಿಂದ ಹಾಳಾದ ಸಿಸಿ ರಸ್ತೆ

ಹಾದ್ರಿಪುರ ಗ್ರಾಮದಲ್ಲಿ ಸುಮಾರು 120 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಯ ಜನರು ವಾಸಿಸುತ್ತಿದ್ದಾರೆ. ದಲಿತ ಸಮುದಾಯದ ಜನವಸತಿ ಪ್ರದೇಶದಲ್ಲಿ ಚರಂಡಿ ನಿರ್ಮಿಸಿ ಹಲವು ದಶಕಗಳೇ ಕಳೆದಿದೆ. ಕೆಲ ವರ್ಷಗಳ ಹಿಂದೆ ಗ್ರಾಮದ ದಲಿತ ಯುವಕರ ಒತ್ತಡಕ್ಕೆ ಮಣಿದಿದ್ದ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು, ಕೆಲವೇ ಕೆಲವು ಮೀಟರ್‌ನಷ್ಟು ಚರಂಡಿ ನಿರ್ಮಿಸಿದ್ದರು. ಆದರೂ ಈವರೆಗೆ ಬಹುತೇಕ ಕಡೆಗಳಲ್ಲಿ ಚರಂಡಿ ನಿರ್ಮಾಣವಾಗಿಲ್ಲ. ಈ ಹಿಂದೆ ಗ್ರಾಮ ಪಂಚಾಯಿತಿ ವತಿಯಿಂದ ಹಾಕಲಾಗಿದ್ದ ಸಿಸಿ ರಸ್ತೆಯನ್ನು ಜೆಜೆಎಂ ಕಾಮಗಾರಿ ಸಂದರ್ಭದಲ್ಲಿ ಕತ್ತರಿಸಿ ಹಾಕಲಾಗಿದ್ದು ಬಹುತೇಕ ರಸ್ತೆ ಹಾಳಾಗಿದೆ. ಇಲ್ಲಿನ ಅಂಬೇಡ್ಕರ್ ಭವನವೂ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ದಲಿತರ ಜನವಸತಿ ಪ್ರದೇಶದಲ್ಲೇ ಸಾಕಷ್ಟು ಸಮಸ್ಯೆಗಳಿದ್ದರೂ, ಪರಿಶಿಷ್ಟರ ಹೆಸರಿನ ನಿಧಿಯಲ್ಲಿ ಅವರಿಗೆ ಸಂಬಂಧವೇ ಇಲ್ಲದೆ ಕಡೆಯಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ.

ದಲಿತರ ಕಾಲೋನಿಯಲ್ಲಿ ದಶಕಗಳ ಹಿಂದೆ ನಿರ್ಮಾಣವಾಗಿರುವ ಚರಂಡಿ ಬಹುತೇಕ ಹಾಳಾಗಿದೆ

“ದಲಿತರು ವಾಸಿಸುವ ಪ್ರದೇಶದಲ್ಲಿ ಹೊಸದಾಗಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಿಸುವಂತೆ ಈ ಹಿಂದೆ ಹಲವು ಭಾರಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಮನವಿ ಮಾಡಿದ್ದೆವು, ‘ನಮ್ಮ ಬಳಿ ಯಾವುದೇ ಫಂಡ್ ಇಲ್ಲ’ ಎಂದು ಹೇಳುತ್ತಿದ್ದರು. ಇದೀಗ ರೂ. 50 ಲಕ್ಷ ವೆಚ್ಚದಲ್ಲಿ ಕೇವಲ ಅರ್ಧ ಕಿಲೋಮೀಟರ್ ರಸ್ತೆ ನಿರ್ಮಾಣ ಮಾಡಿದ್ದಾರೆ. ನಾವು ವಾಸಿಸುತ್ತಿರುವ ಪ್ರದೇಶದಲ್ಲೇ ಸಮಸ್ಯೆ ಸಾಕಷ್ಟಿದ್ದರೂ, ಇಷ್ಡೊಂದು ಹಣವನ್ನು ವಿನಾಕಾರಣ ವ್ಯರ್ಥ ಮಾಡಲಾಗಿದೆ” ಎಂದು ಹೆಸರು ಹೇಳಲಿಚ್ಚಿಸದ ದಲಿತ ಯುವಕನೊಬ್ಬ ಅಸಮಾಧಾನ ಹೊರಹಾಕಿದ್ದಾನೆ.

ಏನಿದು ‘ಪ್ರಗತಿ ಕಾಲೋನಿ’ ಯೋಜನೆ?

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಬಡಾವಣೆಗಳು/ಕಾಲೋನಿಗಳ ಅಭಿವೃದ್ಧಿಗಾಗಿ ಜಾರಿಗೆ ತರಲಾದ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು ‘ಪ್ರಗತಿ ಕಾಲೋನಿ’ ಯೋಜನೆ ಎಂದು ಕರೆಯಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಹೆಚ್ಚಾಗಿ ವಾಸಿಸುವ ಕಾಲೋನಿಗಳು, ಹಾಡಿಗಳು ಹಾಗೂ ತಾಂಡಾಗಳನ್ನು ಹಂತ-ಹಂತವಾಗಿ ‘ಮಾದರಿ ಕಾಲೋನಿ’ಗಳನ್ನಾಗಿ ಪರಿವರ್ತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯ ಮೂಲಕ ದಲಿತರು ವಾಸಿಸುವ ಜನವಸತಿ ಪ್ರದೇಶಗಳಲ್ಲಿ ಸಿಸಿ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ, ಚರಂಡಿ ಹಾಗೂ ವೈಜ್ಞಾನಿಕ ತ್ಯಾಜ್ಯ ನೀರು ನಿರ್ವಹಣೆ ವ್ಯವಸ್ಥೆ, ನೀರು ಶೇಖರಣಾ ಟ್ಯಾಂಕ್ ಸೇರಿದಂತೆ ಶುದ್ಧ ಕುಡಿಯುವ ನೀರಿನ ಸೌಲಭ್ಯ, ವಿದ್ಯುದ್ದೀಕರಣ ಮತ್ತು ಹೈಮಾಸ್ಕ್‌/ಸೌರ ಬೀದಿ ದೀಪಗಳ ಅಳವಡಿಕೆ ಮತ್ತು ಸಮುದಾಯ ಭವನ ಅಥವಾ ಅಧ್ಯಯನ ಕೇಂದ್ರಗಳ ನಿರ್ಮಾಣ ಮಾಡಲಾಗುತ್ತದೆ.

ಅನುದಾನ ಮೂಲ:

ಈ ಯೋಜನೆಗೆ ಅಗತ್ಯವಿರುವ ಹಣವನ್ನು ರಾಜ್ಯ ಸರ್ಕಾರದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ (SCSP-TSP) ಕಾಯ್ದೆಯಡಿಯ ಬಂಡವಾಳ ಅನುದಾನ ಹಾಗೂ ‘ವಿಶೇಷ ಕೇಂದ್ರ ನೆರವು’ (SCA) ನಿಧಿಯಿಂದ ಒದಗಿಸಲಾಗುತ್ತದೆ.

ಕಾಮಗಾರಿಗಳನ್ನು ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಥವಾ ಕರ್ನಾಟಕ ಭೂಸೇನಾ ನಿಗಮ (ಕೆಆರ್‌ಐಡಿಎಲ್‌) ಮೂಲಕ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...