Homeಚಳವಳಿದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ನೀತಿಗಳ ವಿರುದ್ದ ದೇಶದಾದ್ಯಂತ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟದಲ್ಲಿ ನೂರಾರು ಮಹಿಳಾ ರೈತರು ಕೂಡಾ ಭಾಗವಹಿಸಿದ್ದಾರೆ. ಹೋರಾಟವು ಐದನೇ ದಿನಕ್ಕೆ ಕಾಲಿಟ್ಟಿದ್ದು ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ನರೆದಿದ್ದು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ತಮ್ಮ ಆಹಾರವನ್ನು ತಯಾರಿ ಮಾಡಿ ಅದನ್ನು ಇತರರಿಗೂ ಹಂಚುವ ಮೂಲಕ ಮಹಿಳೆಯರು ಈ ಹೋರಾಟಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಪಟಿಯಾಲ ಮೂಲದ 70 ವರ್ಷದ ಮಹಿಳೆ ಗುರುದೇವ್ ಕೌರ್ ಕಳೆದ ಮೂರು ದಿನಗಳಿಂದ ದೆಹಲಿ ಸಿಂಗೂ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. “ನನ್ನ ಆರೋಗ್ಯದ ಕಾಳಜಿ ವಹಿಸಲು ಕುಟುಂಬ ಸದಸ್ಯರಿಂದ ಪ್ರತಿ ಎರಡು ಗಂಟೆಗಳಿಗೊಮ್ಮೆ ಕರೆ ಬರುತ್ತದೆ. ಪಂಜಾಬ್‌ನಲ್ಲಿ ಕಳೆದ ಎರಡು ತಿಂಗಳಿನಿಂದ ನಾವು ಪ್ರತಿದಿನ ನಮ್ಮ ಕ್ರಿಯಾ ಯೋಜನೆ ಕುರಿತು ಸಭೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕೊನೆಯ ಉಸಿರಾಟದವರೆಗೂ ನಾವು ಆಂದೋಲನವನ್ನು ಬೆಂಬಲಿಸಲು ಸಿದ್ಧರಿದ್ದೇವೆ” ಎಂದು ಅವರು ಹೇಳಿದ್ದಾರೆ.

 

“ನನಗೆ ತುಂಬಾ ವಯಸ್ಸಾದ ಕಾರಣ ನನ್ನ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ ನಾನು ಒಬ್ಬಂಟಿಯಾಗಿಲ್ಲ. ಕಾರಣ ನನ್ನ ಬಗ್ಗೆ ಕಾಳಜಿ ವಹಿಸಲು ಇಲ್ಲಿ ನೂರಾರು ಮಹಿಳೆಯರು ಇದ್ದಾರೆ ಮತ್ತು ನಾವು ಪರಸ್ಪರ ಸಹಕಾರದಿಂದ ಇದ್ದೇವೆ. ನಮ್ಮ ದೈನಂದಿನ ಔಷಧಿಗಳು ಮತ್ತು ಇತರ ಅವಶ್ಯಕತೆಗಳನ್ನು ನಮ್ಮೊಂದಿಗೆ ತಂದಿದ್ದೇವೆ ” ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಪ್ರತಿಭಟನಾಕಾರರಾದ 50 ವರ್ಷದ ಚರಣಜೀತ್ ಕೌರ್ ಅವರು ಹೇಳುವಂತೆ, “ತಮ್ಮ ಟ್ರಾಕ್ಟರ್ ಮುಖ್ಯ ಪ್ರತಿಭಟನಾ ಸ್ಥಳದಿಂದ ಕನಿಷ್ಠ ನಾಲ್ಕು ಕಿಲೋಮೀಟರ್ ದೂರದಲ್ಲಿದೆ. ಮಧ್ಯಾಹ್ನ ನಮ್ಮ ರೈತ ನಾಯಕರು ಭಾಷಣಗಳನ್ನು ಮಾಡುವ ಸ್ಥಳಕ್ಕೆ ಹೋಗಿ ನಾವು ಕುಳಿತುಕೊಳ್ಳುತ್ತೇವೆ. ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆಗಳನ್ನು ಕೂಗುತ್ತೇವೆ. ಸಂಜೆಯ ಹೊತ್ತಿಗೆ, ನಾವು ನಮ್ಮ ಟ್ರಾಕ್ಟರ್ ಟ್ರಾಲಿಗಳಿಗೆ ಹಿಂತಿರುಗುತ್ತೇವೆ, ಅದು ಈಗ ನಮ್ಮ ಮನೆಯಾಗಿದೆ” ಎಂದು ಹೇಳಿದ್ದಾರೆ.

“ನಾವು ಪಡಿತರವನ್ನು ಹೇರಳವಾಗಿ ತಂದಿದ್ದೇವೆ. ನಮಗೆ 5-6 ತಿಂಗಳುಗಳ ಕಾಲ ಉಳಿಯಲು ಆಹಾರವಿದೆ. ನಾವು ದೆಹಲಿಗೆ ತೆರಳಲು ನಿರ್ಧರಿಸಿದಾಗಲೆ ಪ್ರತಿಯೊಬ್ಬರೂ ವಿಭಿನ್ನ ವಸ್ತುಗಳನ್ನು ನೀಡಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿದಾಗ ಮಾತ್ರ ಮರಳುತ್ತೇವೆ” ಎಂದು ಪಟಿಯಾಲಕ್ಕೆ ಹತ್ತಿರವಿರುವ ಫತೇಘಡ್‌ನ ಇನ್ನೊಬ್ಬ ರೈತ ಮಹಿಳೆ 62 ವರ್ಷದ ಬಾಲ್ ದೇವ್ ಕೌರ್ ಹೇಳಿದ್ದಾರೆ.

ಲಕ್ಷಾಂತರ ರೈತರು ದೆಹಲಿಯ ಸಿಂಗು ಗಡಿಯನ್ನು ತಲುಪಿ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ಆದರೆ  ರಾಜಧಾನಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ದೆಹಲಿ ಪೊಲೀಸರು ಬುರಾರಿಯಲ್ಲಿರುವ ಸಂತ ನಿರಂಕರಿ ಮೈದಾನವನ್ನು ರೈತರಿಗೆ ತಮ್ಮ ಆಂದೋಲನವನ್ನು ಮುಂದುವರೆಸಲು ಕೇಳಿಕೊಂಡಿದ್ದರಾದರೂ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...