Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...