ನಿಮ್ಮ ಈ `ಪತ್ರಿಕೆ’ಗೆ ನನ್ನ ಪ್ರೀತಿಯ ಸ್ವಾಗತ

0

ಪತ್ರಿಕಾರಂಗ ನನಗೆ ಹೊಸದೇನಲ್ಲ. ಆದರೆ ಐದು ವರ್ಷಗಳ ಹಿಂದೆ ಅಪ್ಪನ ಪತ್ರಿಕೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಾಗ ನಾನೊಂದು ಮರು ಹುಟ್ಟನ್ನೆÃ ಪಡೆದೆ. ಯಾವ ವಿಶ್ವವಿದ್ಯಾನಿಲಯದಲ್ಲೂ ಕಲಿಯಲಾಗದಷ್ಟನ್ನು ಕಳೆದ ಐದು ವರ್ಷಗಳಲ್ಲಿ ಕಲಿತೆ. ಅಂದಿನಿಂದ ಇವತ್ತಿನವರೆಗೂ ಅಪ್ಪನ ಧ್ಯೆÃಯೋದ್ದೆÃಶಗಳು ಮತ್ತು ಕರ್ನಾಟಕದ ಓದುಗರು ನನ್ನ ಕೈ ಹಿಡಿದು ಮುನ್ನೆಡೆಸಿದ್ದಾರೆ.
ನನ್ನ ಮುಂದೆ ಅಂದು ಇದ್ದ ಧ್ಯೆÃಯಗಳು ಮೂರು: ಅಧಿಕಾರ ವರ್ಗದ ಬಗ್ಗೆ ನಿಷ್ಠುರತೆ, ಜನಸಾಮಾನ್ಯರ ಬಗ್ಗೆ ಪ್ರಿÃತಿ ಮತ್ತು ಎಂತಹ ಕಠಿಣ ಸಂದರ್ಭದಲ್ಲೂ ಅನ್ಯಾಯದೊಂದಿಗೆ ರಾಜಿ ಮಾಡಿಕೊಳ್ಳದಂತೆ ಆತ್ಮಸ್ಥೆÊರ್ಯವನ್ನು ಕಾಪಾಡಿಕೊಳ್ಳುವುದು. ಇವು ಮೂರು ನನ್ನನ್ನು ಇಂದಿಗೂ ಕಾಪಾಡಿಕೊಂಡು ಬಂದಿವೆ. ನನ್ನ ಬದುಕಿನ ಈ ಹೊಸ ಅಧ್ಯಾಯದ ಹೊಸ್ತಿಲಲ್ಲಿ ಇವೇ ನನಗೆ ಶ್ರಿÃರಕ್ಷೆ ಕೂಡ ಆಗಿವೆ; ಅಪ್ಪನ `ಪತ್ರಿಕೆ’ಗೆ ಮರುಹುಟ್ಟು ನೀಡುವ ಶಕ್ತಿಯನ್ನು ಕೊಟ್ಟಿವೆ.
ಕೇವಲ ಬರವಣಿಗೆ ಮಾತ್ರ ಸಾಲದು; ಜನರ ಹತ್ತಿರ ಹೋಗಬೇಕು; ಅವರ ಆಳದ ನೋವನ್ನು ಅವರಿಂದಲೇ ಕೇಳಬೇಕು ಎನ್ನುವುದೂ ಈ ವೃತ್ತಿಧರ್ಮದ ವಿಸ್ತರಣೆ. ಹೀಗಾಗಿ ನಾನು ಜನರ ಹೋರಾಟಗಳಲ್ಲಿ ಪಾಲ್ಗೊಂಡೆ. ಅಪ್ಪ ಯಾವಾಗಲೂ ಹೇಳುತ್ತಿದ್ದರು “ಬೀದಿಗಿಳಿದು ಜನರ ಪರವಾಗಿ ಪ್ರತಿಭಟಿಸದಿದ್ದರೆ, ಅನ್ಯಾಯದ ವಿರುದ್ಧ ಹೋರಾಡದಿದ್ದರೆ, ಸಮಾಜದ ಒಳಿತಿಗಾಗಿ ದುಡಿಯದಿದ್ದರೆ ನಾವು ಬದುಕಿದ್ದೂ useless’’ ಎಂದು.
ಯಾವ ದಿಕ್ಕಿನಿಂದ ಚಂಡಮಾರುತಗಳೂ, ಬಿರುಗಾಳಿಯೂ ಬೀಸುತ್ತವೆಯೋ, ಅದೇ ದಿಕ್ಕಿನಿಂದ ದಾರಿ ತೋರುವ ಬೆಳಕೂ ಮೂಡಿ ಬರುತ್ತದೆ. ಪ್ರತಿವಾರದ ಕಿರಿ-ಕಿರಿ, ಅವಮಾನ, ದಬ್ಬಾಳಿಕೆಯಿಂದ ಜರ್ಜರಿತಳಾಗಿದ್ದ ನನಗೆ ಇದೊಂದು ರೀತಿಯಲ್ಲಿ ಬಿಡುಗಡೆಯ ನೀಡಿತು. ಆದರೆ ಈ ಬಿಡುಗಡೆ ಪಡೆದ ನಂತರ ನನ್ನ ಮುಂದೆ ಇದ್ದದ್ದು ಮೂರು ಆಯ್ಕೆಗಳು: ಒಂದು, ಪತ್ರಿಕೋದ್ಯಮದಲ್ಲಿ ಎರಡು ದಶಕಗಳ ಅನುಭವವಿರುವ ನನಗೆ ಕೈತುಂಬ ಸಂಬಳ ಸಿಗುವ ಕೆಲಸಕ್ಕೆÃನು ತೊಂದರೆ ಇಲ್ಲ. ದೆಹಲಿಗೋ, ಮುಂಬೈಗೋ ಹೋಗಿ ಆರಾಮವಾಗಿ ಜೀವಿಸಬಲ್ಲೆ. ಎರಡನೆಯದು, ಇದೆಲ್ಲಕ್ಕೂ ತಿಲಾಂಜಲಿ ಹೇಳಿ ನೆಲಮಂಗಲದ ಬಳಿ ಇರುವ ಅಮ್ಮನ ಐದು ಎಕರೆ ತೋಟವನ್ನು ನೋಡಿಕೊಳ್ಳುತ್ತಾ, ರೈತ ಮಹಿಳೆಯಾಗಿ ಜೀವನ ಸಾಗಿಸುವುದು. ಕಳೆದ ಒಂದು ವರ್ಷದಿಂದ ಆ ತೋಟದ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ನನಗೆ ಅಲ್ಲಿನ ತೆಂಗು, ಮಾವು ಮತ್ತು ಅಡಿಕೆ ಮರಗಳು ನೀಡುವ ಸಂತೋಷ ಮತ್ತು ಆರ್ಥಿಕ ಭಾರ ಎರಡೂ ಸಾಮಾನ್ಯವಾಗಿದೆ. ಇರಲಿ. ನನ್ನ ಮುಂದೆ ಇದ್ದ ಮೂರನೆ ಆಯ್ಕೆ: ಇನ್ನು ಮುಂದೆ ಯಾವ ಮುಲಾಜು, ಸಣ್ಣತನ, ಸ್ವಾರ್ಥದಿಂದ ಹುಟ್ಟುವ ಋಣಗಳ ಭಾರವಿಲ್ಲದೆ ಅಪ್ಪನ ಹೆಸರಿನಲ್ಲಿ ಇನ್ನೊಂದು ಪತ್ರಿಕೆ ಸ್ಥಾಪಿಸಿ ಅವರ ಧ್ಯೆÃಯೋದ್ದೆÃಶಗಳನ್ನು ಮುನ್ನಡೆಸುವುದು. ಈ ಮೂರರಲ್ಲಿ ಕೊನೆಯದ್ದು ಬಹಳ ಕಷ್ಟದಿಂದ ಕೂಡಿರುವಂತದ್ದು. ಆದರೆ ಕೊನೆಗೆ ಅದನ್ನೆÃ ಆಯ್ಕೆ ಮಾಡಿಕೊಂಡಿದ್ದೆÃನೆ.
ಇಷ್ಟೊಂದು ಜನರ ವಿಶ್ವಾಸ, ಬೆಂಬಲ, ಸ್ಫೂರ್ತಿ ನನಗಿರುವುದು ಅಪ್ಪನ ನಿಲುವುಗಳನ್ನು ನಾನು ಪಾಲಿಸಿಕೊಂಡು ಬಂದಿದ್ದರಿಂದಲೇ ಎಂಬುದು ಸ್ಪಷ್ಟ… ಎಲ್ಲಿಯವರೆಗೆ ಈ ಧ್ಯೆÃಯ ನನ್ನದಾಗಿರುವುದೋ ಅಲ್ಲಿಯವರೆಗೂ ಇದೇ ಜನರ ಪ್ರಿÃತಿ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ಮೇಲಿನ ಅನುಕಂಪೆದಿಂದ ಮಾತ್ರ ಈ ಸಹಾಯ ಬಂದಿದ್ದರೆ, ನಾನು ಋಣದ ಭಾರದಲ್ಲಿ ಕುಸಿಯುತ್ತಿದ್ದೆ. ಆದರೆ ವೈಯಕ್ತಿಕ ಋಣದ ಲೇಪ ಸ್ವಲ್ಪವೂ ಇಲ್ಲದ ಹಾಗೆ ನನಗೆ ಬೆಂಬಲದ ಮಹಾಪÇರ ಹರಿದು ಬಂದಿರುವುದು ನನಗೆ ಅತ್ಯಂತ ಹೆಮ್ಮೆ, ಸಂತೋಷ ತಂದಿದೆ; ಮತ್ತು ಹುರುಪನ್ನು ನೀಡಿದೆ.
ನಿಮ್ಮ ಈ `ಪತ್ರಿಕೆ’ಗೆ ನನ್ನ ಪ್ರಿÃತಿಯ ಸ್ವಾಗತ.

– ಗೌರಿ ಲಂಕೇಶ್,
ಮಾರ್ಚ್ 16, 2005
(ಲಂಕೇಶ್ ಮರುಹುಟ್ಟು ಹೆಜ್ಜೆಯ ಮೂಲಕ ಗೌರಿಯವರು ತಮ್ಮದೇ ಹೊಸ ಪತ್ರಿಕೆ ಶುರು ಮಾಡಿದಾಗ ಬರೆದ ಸಂಪಾದಕೀಯದಿಂದ…)

LEAVE A REPLY

Please enter your comment!
Please enter your name here