Homeದಲಿತ್ ಫೈಲ್ಸ್ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

- Advertisement -
- Advertisement -

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.

ಘಟನೆಯ ಹಿನ್ನೆಲೆ:

ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ದಲಿತ ಸಮುದಾಯಕ್ಕೆ ಸೇರಿದ ಬಾಲಕ ಸಿಂಹಾದ್ರಿ ಮೆರವಣಿಗೆಯಲ್ಲಿ ಕುಣಿಯುತ್ತಿದ್ದಾಗ, ಅದೇ ಗ್ರಾಮದ ಮಾರುತೇಶ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ಆಕ್ಷೇಪವು ಇಬ್ಬರ ನಡುವೆ ತೀವ್ರ ಗಲಾಟೆಗೆ ಕಾರಣವಾಗಿದೆ. ಈ ವೇಳೆ ಆರೋಪಿ ಮಾರುತೇಶ ಬಾಲಕನನ್ನು ಕೆಳಗೆ ತಳ್ಳಿ, ಕಲ್ಲಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಆತ ಮೃತಪಟ್ಟಿದ್ದಾನೆ.

ತಾಯಿಯ ದೂರು:

ಕೊಲೆಯಾದ ಸಿಂಹಾದ್ರಿಯ ತಾಯಿ ಅನ್ನಪೂರ್ಣಾ ಅವರು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ರವಿವಾರ ಅಪರಾಹ್ನ 2:30ರ ಸುಮಾರಿಗೆ ಗ್ರಾಮದ ಊರ ಮಾರಮ್ಮ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಕುಣಿಯಲು ಹೋಗಿದ್ದ ಸಿಂಹಾದ್ರಿಗೆ ಆರೋಪಿ ಮಾರುತೇಶ, “ನೀನು ಕೀಳು ಜಾತಿಯವನು, ನಮ್ಮ ಗಣೇಶನ ಹತ್ತಿರ ಏಕೆ ಬಂದಿದ್ದೀಯಾ?” ಎಂದು ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಈ ವೇಳೆ “ನಾನು ಗಣೇಶನನ್ನು ನೋಡಲು ಬಂದಿದ್ದೇನೆ” ಎಂದು ಸಿಂಹಾದ್ರಿ ಹೇಳಿದಾಗ, ಆಕ್ರೋಶಗೊಂಡ ಆರೋಪಿ ಆತನ ಕಪಾಳಕ್ಕೆ ಹೊಡೆದು, ರಸ್ತೆ ಬದಿಯಲ್ಲಿದ್ದ ಕಲ್ಲಿನಿಂದ ಎದೆಯ ಭಾಗಕ್ಕೆ ತೀವ್ರವಾಗಿ ಗುದ್ದಿದ್ದಾನೆ. ಇದರಿಂದಾಗಿ ತೀವ್ರ ಅಸ್ವಸ್ಥಗೊಂಡ ಸಿಂಹಾದ್ರಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆತ ಈಗಾಗಲೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಕೀಳು ಜಾತಿಯವನೆಂಬ ಕಾರಣಕ್ಕೆ ತಮ್ಮ ಮಗನನ್ನು ಹತ್ಯೆ ಮಾಡಲಾಗಿದ್ದು, ಆರೋಪಿ ಹಾಗೂ ಆತನಿಗೆ ಕುಮ್ಮಕ್ಕು ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ತಾಯಿ ಒತ್ತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಮಿಡಿಗೇಶಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS), 2023 ರ ವಿವಿಧ ಸೆಕ್ಷನ್‌ಗಳಡಿ (103(1), 351(2), 352) ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರತಿಭಟನೆ ಮತ್ತು ಆಕ್ರೋಶ:

ದಲಿತ ಬಾಲಕನ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯ ತಕ್ಷಣದ ಬಂಧನಕ್ಕೆ ಆಗ್ರಹಿಸಿ ದಲಿತ ಮುಖಂಡರು ರವಿವಾರ ರಾತ್ರಿ ಮಿಡಿಗೇಶಿ ಪೊಲೀಸ್ ಠಾಣೆಯೆದುರು ಧರಣಿ ನಡೆಸಿದ್ದಾರೆ. ಅಲ್ಲದೆ, ಮಾದಿಗ ಸಮುದಾಯದ ಮೇಲಿನ ದೌರ್ಜನ್ಯ ತಡೆಯಲು ವಿಶೇಷ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಪೊಲೀಸ್ ಕ್ರಮ:

ಘಟನೆಗೆ ಸಂಬಂಧಿಸಿದಂತೆ ಕಸಾಪುರ ಗ್ರಾಮದ ಮಾರುತೇಶ (ಬಂಡೆ ಗುಂಡ) ಎಂಬಾತನ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...