Homeಮುಖಪುಟಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದಲ್ಲಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳ ನಡುವೆ ಯಾವುದೇ ಆಂತರಿಕ ಗೊಂದಲಗಳಿಲ್ಲ ಎಂದು ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದೆ ಸುಪ್ರಿಯಾ ಸುಳೆ ಹೇಳಿದರು.

ಠಾಕ್ರೆ ಮತ್ತು ಶರದ್ ಪವಾರ್, ಸೋನಿಯಾ ಗಾಂಧಿ, ಉದ್ಧವ್ ನಡುವಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಹಗ್ಗ ಜಗ್ಗಾಟ ನಡೆಯುತ್ತಿದೆ ಎಂಬ ಸುದ್ದಿಗೆ ಸುಪ್ರಿಯಾ ಸ್ಪಷ್ಟನೆ ನೀಡಿದ್ದಾರೆ.

‘ಆಂತರಿಕವಾಗಿ ಯಾವುದೇ ಗೊಂದಲವಿಲ್ಲ. 15 ದಿನಗಳ ಹಿಂದೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ನಡುವೆ ಸಭೆ ನಡೆದಿತ್ತು. ಆ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳಿಗೆ ಸ್ಪಷ್ಟನೆ ಸಿಕ್ಕಿದೆ. ಮುಂದಿನ 8ರಂದು ಅಧಿಕೃತವಾಗಿ ಮಾಹಿತಿ ಪ್ರಕಟಿಸಲಾಗುವುದು. ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಸೀಟು ಹಂಚಿಕೆ ಸೂತ್ರದಲ್ಲಿ ಏರಿಳಿತಗಳಿರುತ್ತವೆ. ಹಾಗಾಗಿ, ಇಂತ ಗೊಂದಲ ಮೂಡುತ್ತಿವೆ’ ಎಂದರು.

ಇಂಡಿಯಾ ಒಕ್ಕೂಟದಲ್ಲಿ ಪ್ರಕಾಶ್ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ಕೇಳಿದಾಗ, ‘ಅವರು ಖಂಡಿತವಾಗಿಯೂ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ’ ಎಂದು ಹೇಳಿದರು.

ಇದಕ್ಕೂ ಮೊದಲು, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ, ಮಾಜಿ ಲೋಕಸಭಾ ಸಂಸದ ಪ್ರಕಾಶ್ ಅಂಬೇಡ್ಕರ್ ಅವರು 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಇಂಡಿಯಾ ಮೈತ್ರಿಕೂಟಕ್ಕೆ ಸೇರುವ ಆಸಕ್ತಿಯನ್ನು ಪುನರುಚ್ಚರಿಸಿದರು.

ವಿಬಿಎ (ವಂಚಿತ್ ಬಹುಜನ ಆಘಾಡಿ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಪ್ರತಿಯೊಂದು ಪಕ್ಷಕ್ಕೂ 12 ಸ್ಥಾನಗಳನ್ನು ನೀಡುವ ತಮ್ಮ ಪ್ರಸ್ತಾವಿತ ಸೂತ್ರವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಮಾತನಾಡಿ, ‘ಕಾಂಗ್ರೆಸ್ ಶೂನ್ಯದಿಂದ ಪ್ರಾರಂಭವಾಗಬೇಕು ಎಂದು ನಾನು ಹೇಳಿದ್ದೆ, ಕಾಂಗ್ರೆಸ್ ಶೂನ್ಯ ಎಂದು ಹೇಳಿಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಬ್ಬನೇ ಒಬ್ಬ ಸಂಸದನನ್ನು ಹೊಂದಿಲ್ಲ. ನಾವು 18 ಸಂಸದರನ್ನು ಹೊಂದಿದ್ದೇವೆ. ಆದರೆ, ಕೆಲವರು ಬಿಟ್ಟು ಹೋಗಿದ್ದಾರೆ, ನಾವೂ ಕೆಲವರನ್ನು ಬಿಟ್ಟಿದ್ದೇವೆ. ನಮ್ಮ ಮೈತ್ರಿ ಕಾಂಗ್ರೆಸ್ ಜೊತೆಗಿದೆ ಮತ್ತು ಮಹಾ ವಿಕಾಸ್ ಅಘಾಡಿ ಸುಮಾರು 40 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿ ಗೆಲ್ಲಲು ಇವಿಎಂಗಳು ಬೇಕು, ಅವರು ಏಕಾಂಗಿಯಾಗಿ ಗೆಲ್ಲಲು ಸಾಧ್ಯವಿಲ್ಲ’ ಎಂದರು.

ಆದರೆ, ಶಿವಸೇನೆಯ (ಯುಬಿಟಿ) ಬೇಡಿಕೆಗೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ಪಕ್ಷ, ಸೀಟು ಹಂಚಿಕೆ ಸಂಕೀರ್ಣ ವಿಷಯವಾಗಿದ್ದು, ಸುಲಭವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಇಂಡಿಯಾ ಬ್ಲಾಕ್‌ನಲ್ಲಿರುವ ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಡಿ ಬಿಜೆಪಿಯನ್ನು ಸೋಲಿಸಬೇಕಾದರೆ, ನಾವು ಆಂತರಿಕ ಕಚ್ಚಾಟವನ್ನು ನಿಲ್ಲಿಸಬೇಕು. ಪತ್ರಿಕೆಯಿಂದ, ಶಿವಸೇನೆಯು 23 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ನನಗೆ ತಿಳಿದಿದೆ’ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಇದನ್ನೂ ಓದಿ; ಅತ್ಯಾಚಾರ ಯತ್ನ ವಿಫಲ; 6 ವರ್ಷದ ಬಾಲಕಿಯನ್ನು ಕ್ರೂರವಾಗಿ ಹತ್ಯೆಗೈದ ಕಾವಲುಗಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...