Homeಮುಖಪುಟಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ

ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ

- Advertisement -
- Advertisement -

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2018ರ ಸಾಲಿನ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಪುರಸ್ಕøತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ, ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎನ್ ಕೃಷ್ಣನ್ ಅವರಿಗೆ ಟಿ.ಚೌಡಯ್ಯ ಪ್ರಶಸ್ತಿ ಮತ್ತು ಹಾವೇರಿಯ ಚನ್ನಮ್ಮ ಹಳ್ಳಿಕೇರಿ ಭಗವಾನ್‍ರವರಿಗೆ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಇಲಾಖೆಯ ಸಚಿವ ಡಿ.ಕೆ ಶಿವಕುಮಾರ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಅಲ್ಲದೇ 2018ನೇ ರಾಜ್ಯ ಪ್ರಶಸ್ತಿ ವಿಭಾಗದಲ್ಲಿ ಬಾಗಲಕೋಟೆಯ ಪ್ರಕಾಶ್ ಕಡಪಟ್ಟಿ, ಬೀದರ್‍ನ ಚಂದ್ರಶಾ ತಮ್ಮಣ್ಣಪ್ಪ ಮಾಳಗೆ ಮೈಸೂರಿನ ಹಿಣಕಲ್ ಮಹದೇವಯ್ಯ, ಬೆಂಗಳೂರಿನ ಸಿ.ಚಂದ್ರಶೇಖರ ಹಾಗೂ ಉಡುಪಿಯ ಲಕ್ಷ್ಮೀನಾರಾಯಣ ಆಚಾರ್ಯರವರಿಗೆ ಕ್ರಮವಾಗಿ ರಂಗಭೂಮಿ, ಜನಪದ ಹಾಡು, ಮೌಖಿಕ ಕಾವ್ಯ, ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗದಲ್ಲಿ ಇವರನ್ನು ಆರಿಸಲಾಗಿದೆ.

ಸಾಹಿತ್ಯ ಸಂಸ್ಕೃತಿ ವಿಭಾಗದಲ್ಲಿ ಧಾರವಾಡದ ಎಚ್.ಎಂ ಬೀಳಗಿ, ಪ್ರೊ.ಕೆ.ಜೆ ಕುಂದಣಗಾರ, ಬಿ.ಗಂಗಾಧರಮೂರ್ತಿ, ಎಸ್.ಆರ್ ಹಿರೇಮಠ, ದು.ಸರಸ್ವತಿ ಮತ್ತು ಪ್ರೊ.ಷ.ಶೆಟ್ಟರ್ ಅವರಿಗೆ ಪುರಸ್ಕಾರ ಘೋಷಿಸಿದೆ. ರಾಷ್ಟ್ರೀಯ ಪ್ರಶಸ್ತಿಯು 10 ಲಕ್ಷ ರೂ ಮತ್ತು ಫಲಕ, ರಾಜ್ಯ ಪ್ರಶಸ್ತಿಯು 5 ಲಕ್ಷ ಮತ್ತು ಫಲಕವನ್ನು ಒಳಗೊಂಡಿದ್ದು ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ರಾಜ್ಯ ಸರ್ಕಾರ ಅಳಿವು ಉಳಿವಿನ ಹಂಚಿನಲ್ಲಿರುವಾಗ ಈ ಪಟ್ಟಿ ಬಿಡುಗಡೆಯಾಗಿದ್ದು ಅರ್ಹರಿಗೆ ಪ್ರಶಸ್ತಿ ಲಭಿಸಿದೆ ಎಂಬ ಮಾತುಗಳು ಸಾಮಾಜಿಕ ವಲಯದಲ್ಲಿ ಕೇಳಿಬರುತ್ತಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...