Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...