Homeಮುಖಪುಟಆಪ್ ಸೇರಿದ ಮಾಜಿ ಮಿಸ್ ಇಂಡಿಯಾ ದೆಹಲಿ- ಮಾನ್ಸಿ ಸೆಹಗಲ್‌

ಆಪ್ ಸೇರಿದ ಮಾಜಿ ಮಿಸ್ ಇಂಡಿಯಾ ದೆಹಲಿ- ಮಾನ್ಸಿ ಸೆಹಗಲ್‌

’ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ’

- Advertisement -
- Advertisement -

ಮಿಸ್ ಇಂಡಿಯಾ ದೆಹಲಿ- 2019ರ ವಿಜೇತೆ ಮಾನ್ಸಿ ಸೆಹಗಲ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಮುಖಂಡ ರಾಘವ್ ಚಾಡ್ಡಾ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿಕೊಂಡಿದ್ದಾರೆ ಎಂದು ಎಎಪಿ ಸೋಮವಾರ ಹೇಳಿಕೆ ಬಿಡುಗಡೆ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಆಪ್ ಪಕ್ಷಕ್ಕೆ ಸೇರಲು ಪ್ರೇರಣೆ ನೀಡಿತು ಎಂದು ಮಾಜಿ ಮಿಸ್ ಇಂಡಿಯಾ ದೆಹಲಿ ಮಾನ್ಸಿ ಸೆಹಗಲ್ ಹೇಳಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರಲು ಮನಸ್ಸು ಮಾಡಿದೆ. ಶುದ್ಧ ರಾಜಕಾರಣದ ಮೂಲಕ ನಾವು ಬದುಕುವ ಈ ಜಗತ್ತಿನಲ್ಲಿ ಗಣನೀಯ ಬದಲಾವಣೆಯನ್ನು ತರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಮಾನ್ಸಿ ಸೆಹಗಲ್ ಹೇಳಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ತಾವು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿರುವ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಮಾನ್ಸಿ,  ದೇಶದಲ್ಲಿ ಬದಲಾವಣೆ ತರಲು ಯುವಜನರು ಮತ್ತು ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಮತ್ತು ಎಎಪಿಗೆ ಸೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು, ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ನಾನು ಎಎಪಿ ಸೇರಿದ್ದೇನೆ. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬದಲಾವಣೆಯಾದರೇ ದೇಶದ ಬದಲಾವಣೆಯಾಗುತ್ತದೆ. ದೆಹಲಿ ನಿವಾಸಿಯಾಗಿ ಈ ವಿಷಯಗಳಲ್ಲಿ ಇಲ್ಲಿ ಆಗಿರುವ ಬದಲಾವಣೆಯನ್ನು ನಾನು ನೋಡಿದ್ದೇನೆ. ಸರ್ಕಾರದ ಕೆಲಸದಿಂದ ನಾನು ಪ್ರೇರಿತಳಾಗಿದ್ದೇನೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

“ನಮ್ಮ ಯುವಜನರನ್ನು ಮತ್ತು ವಿಶೇಷವಾಗಿ ನಮ್ಮ ಮಹಿಳೆಯರನ್ನು ನಮ್ಮೊಂದಿಗೆ ಬರಲು ಮತ್ತು ಸೇರಲು ನಾನು ಒತ್ತಾಯಿಸುತ್ತೇನೆ ಜೊತೆಗೆ ನಾವೆಲ್ಲರೂ ನೋಡಲು ಬಯಸುವ ಬದಲಾವಣೆಯನ್ನು ತರಬೇಕು” ಎಂದು ಹೇಳಿದ್ದಾರೆ.

Miss Delhi 2019 Mansi Sehgal - 24x7review

“ರಾಜಕೀಯದಲ್ಲಿ ಯುವಜನತೆ ತೊಡಗಿಸಿಕೊಳ್ಳಲು ಮತ್ತು ಜನರಿಗೆ ಸೇವೆ ಸಲ್ಲಿಸಲು ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಯುವಜನರಲ್ಲಿ ವಿಶ್ವಾಸ ಮೂಡಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಎಎಪಿ ಕುಟುಂಬವು ಪ್ರತಿ ದಿನ ದೊಡ್ಡದಾಗುತ್ತಿದೆ. ನಾನು ಮಾನ್ಸಿ ಅವರನ್ನು ಎಎಪಿ ಕುಟುಂಬಕ್ಕೆ ಸ್ವಾಗತಿಸುತ್ತೇನೆ” ಎಂದು ಶಾಸಕ ರಾಘವ್ ಚಾಡ್ಡಾ ಹೇಳಿದ್ದಾರೆ. ಮಾನ್ಸಿ ಸೆಹಗಲ್ ಎಂಜಿನಿಯರ್ ಆಗಿದ್ದು, ತನ್ನದೇ ಆದ ಉದ್ಯಮ ನಡೆಸುತ್ತಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...