Homeಮುಖಪುಟಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ಒಂದು ತಿಂಗಳಿಗೆ 2000 ರೂಗಳಷ್ಟು ಸಹಾಯ ಧನ ನೀಡುತ್ತೇವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅಸ್ಸಾಂನ ತೇಜ್‌ಪುರದಲ್ಲಿ ಮಂಗಳವಾರ ಹೇಳಿದ್ದಾರೆ.

ಅಸ್ಸಾಂನ ತೇಜ್‌ಪುರದಲ್ಲಿ ನಡೆದ ಪಕ್ಷದ ರ್‍ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, “ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಇಲ್ಲಿ ಸಿಎಎ ಜಾರಿಯಾಗದಂತೆ ನೋಡಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು. ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

“ಪಕ್ಷವು ಅಧಿಕಾರಕ್ಕೆ ಬಂದರೆ ಎಲ್ಲಾ ಗೃಹಿಣಿಯರಿಗೆ ‘ಗೃಹಿಣಿ ಸಮ್ಮಾನ್’ ಯೋಜನೆಯಡಿಯಲ್ಲಿ ತಿಂಗಳಿಗೆ 2,000 ರೂ. ನೀಡುತ್ತೇವೆ. ಚಹಾ ತೋಟಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ದಿನಕ್ಕೆ 365 ರೂ. ನೀಡುತ್ತೇವೆ. ವರ್ಷವೊಂದಕ್ಕೆ 5 ಲಕ್ಷ ಹೊಸ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ. ಇದು ಕೇವಲ ಭರವಸೆಯಲ್ಲ, ಗ್ಯಾರೆಂಟಿಯಾಗಿದೆ” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಮುಂದಿನ ಕೆಲವೆ ತಿಂಗಳುಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಓಟಿನ ಬೇಟೆಯಲ್ಲಿ ತೊಡಗಿವೆ.

ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...