Homeಮುಖಪುಟ18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಮಾಸಿಕ ₹1,000; ದೆಹಲಿ ಸರ್ಕಾರದಿಂದ ಘೋಷಣೆ

18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಮಾಸಿಕ ₹1,000; ದೆಹಲಿ ಸರ್ಕಾರದಿಂದ ಘೋಷಣೆ

- Advertisement -
- Advertisement -

ದೆಹಲಿ ಹಣಕಾಸು ಸಚಿವ ಅತಿಶಿ ಇಂದು ₹76,000 ಕೋಟಿ ಬಜೆಟ್ ಮಂಡಿಸುತ್ತಿದ್ದಂತೆ ದೆಹಲಿ ಸರ್ಕಾರವು ‘ಮುಖ್ಯಮಂತ್ರಿ ಸಮ್ಮಾನ್’ ಯೋಜನೆ ಅಡಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ತಿಂಗಳಿಗೆ ₹1,000 ರೂಪಾಯಿಗಳನ್ನು ಘೋಷಿಸಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ 10ನೇ ಬಜೆಟ್ ಇದಾಗಿದ್ದು, ದೆಹಲಿ ವಿಧಾನಸಭೆಯಲ್ಲಿ ಘೋಷಣೆ ಮಾಡಿದ ಸಚಿವೆ ಅತಿಶಿ, ‘ಹಿಂದೆ, ಸೀಮಿತ ಸಂಪನ್ಮೂಲಗಳನ್ನು ಹೊಂದಿದ್ದ ದೆಹಲಿಯ ನಿವಾಸಿಗಳು ತಮ್ಮ ಪುತ್ರರನ್ನು ಖಾಸಗಿ ಶಾಲೆಗಳಿಗೆ ಮತ್ತು ಹೆಣ್ಣು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುತ್ತಿದ್ದರು’ ಎಂದು ಹೇಳಿದರು.

‘ಒಮ್ಮೆ 95 ಪ್ರತಿಶತ ಹುಡುಗಿಯರು ತಮ್ಮ ಸಹೋದರರು ಖಾಸಗಿ ಶಾಲೆಗಳಲ್ಲಿ ಓದುತ್ತಾರೆ ಎಂದು ನನಗೆ ಹೇಳಿದರು. ಆದರೆ, ಈಗ ದೆಹಲಿಯ ಸರ್ಕಾರಿ ಶಾಲೆಗಳ ಹುಡುಗಿಯರು ಐಐಟಿ, ನೀಟ್ ಪರೀಕ್ಷೆಗಳಲ್ಲಿ ತೇರ್ಗಡೆಯಾಗುತ್ತಿದ್ದಾರೆ’ ಎಂದು ಅವರು ಹೇಳಿದರು.

‘ಇದುವರೆಗೆ ಶ್ರೀಮಂತ ಕುಟುಂಬದ ಮಗು ಶ್ರೀಮಂತ ಮತ್ತು ಬಡ ಕುಟುಂಬದ ಮಗು ಬಡವಾಗಿರುತ್ತದೆ. ಆದರೆ ಇದು ‘ರಾಮ ರಾಜ್ಯ’ ಪರಿಕಲ್ಪನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಕೇಜ್ರಿವಾಲ್ ಸರ್ಕಾರವು 2015 ರಿಂದ 22,711 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದೆ. ಶಿಕ್ಷಣವು ನಮ್ಮ ಸರ್ಕಾರದ ಆದ್ಯತೆಯಾಗಿದೆ… ಈ ವರ್ಷ ಶಿಕ್ಷಣಕ್ಕಾಗಿ 16,396 ಕೋಟಿ ರೂ.ಗಳನ್ನು ಒದಗಿಸಿದೆ’ ಎಂದು ದೆಹಲಿ ಹಣಕಾಸು ಸಚಿವರು ಹೇಳಿದರು.

ಇದನ್ನೂ ಓದಿ; 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...