Homeಕರ್ನಾಟಕ'ಮತಗಳ್ಳತನ' ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

‘ಮತಗಳ್ಳತನ’ ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ (ನ.8) ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಸಹಿ ಸಂಗ್ರಹ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಈ ಅಭಿಯಾನ ಇನ್ನೂ ಆಗದ ಪ್ರದೇಶಗಳಲ್ಲಿ ಇನ್ನು 3–4 ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ವಿಮಾನದಲ್ಲಿ ದೆಹಲಿಗೆ ತಲುಪಿಸಲಾಗುವುದು ಎಂದರು.

ಇದೇ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಮತಪತ್ರದ ಮೂಲಕ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ

ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಚುನಾವಣಾ ಆಯೋಗ ನಮ್ಮ ಬಳಿಯೇ ಸಾಕ್ಷಿ ಕೇಳುತ್ತಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಸಹಿ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿಯವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಂದೋಲನ

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾನದ ಅಧ್ಯಯನ ಮಾಡಿದಾಗ, ಅಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ ಮನೆಯಲ್ಲಿ 80ಕ್ಕೂ ಹೆಚ್ಚು ಮತಗಳನ್ನು ಸೇರಿಸಲಾಗಿತ್ತು. ಒಂದು ಬಾರ್‌ನಲ್ಲಿ 70-80 ಮತದಾರರಿರುವುದನ್ನು ದಾಖಲೆ ಸಮೇತ ಬಹಿರಂಗಪಡಿಸಿ ರಾಹುಲ್ ಗಾಂಧಿ ಅವರು ದೇಶದ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳು ಈ ಅಕ್ರಮದ ಬಗ್ಗೆ ಬೆಳಕು ಚೆಲ್ಲಿ ಇಲ್ಲಿಂದ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದರು. ಈ ಅಕ್ರಮ ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ಗಾಂಧಿ ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳಿವೆ. ಒಂದು ಕ್ಷೇತ್ರದಲ್ಲಿ ಇರುವ ಮತದಾರರ ಸಂಖ್ಯೆ ಅಷ್ಟೇ ಇದ್ದರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗದ ಕುಟುಂಬಗಳ ಸದಸ್ಯರ ಮತವನ್ನು ಬೇರೆ ಬೇರೆ ಬೂತ್‌ಗಳಿಗೆ ಹಾಕಿ ವರ್ಗಾವಣೆ ಮಾಡಿರುವ ಷಡ್ಯಂತ್ರ ಬಯಲಾಗಿದೆ ಎಂದು ವಿವರಿಸಿದರು.

ಆಳಂದ ಕ್ಷೇತ್ರದ ಅಕ್ರಮದ ತನಿಖೆಯ ವರದಿ ಶೀಘ್ರ :

ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕರು ಚುನಾವಣೆಗೂ ಮುನ್ನವೇ ಅಕ್ರಮದ ಬಗ್ಗೆ ದೂರು ನೀಡಿ ಆಯೋಗದ ಗಮನ ಸೆಳೆಯುತ್ತಾರೆ. ನಂತರ ಈ ಅಕ್ರಮದ ಬಗ್ಗೆ ತನಿಖೆ ಆರಂಭವಾಗುತ್ತದೆ. ಚುನಾವಣಾ ಆಯೋಗವು ಅಧಿಕೃತ ದೂರು ದಾಖಲಿಸಿಕೊಳ್ಳುತ್ತದೆ. ಆಳಂದದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಮತದಾರಪಟ್ಟಿಯಿಂದ ಹೆಸರು ಕೈ ಬಿಡುವಂತೆ ನಕಲಿ ಅರ್ಜಿ ಸಲ್ಲಿಸಲಾಗಿತ್ತು. ಕೇವಲ 17 ನಿಮಿಷಗಳಲ್ಲಿ 14 ಮತಗಳನ್ನು ಬೆಳಗಿನ ಜಾವದಲ್ಲಿ ತೆಗೆದುಹಾಕಲಾಗಿರುತ್ತದೆ. ಈ ರೀತಿ 6 ಸಾವಿರ ಮತ ತೆಗೆಯಲು ಪ್ರಯತ್ನಿಸುತ್ತಾರೆ. ಈ ವಿಚಾರವಾಗಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಈ ತನಿಖೆ ಮೂಲಕ ಹೊರ ರಾಜ್ಯದವರು ಹಾಗೂ ಅವರ ದೂರವಾಣಿ ಸಂಖ್ಯೆ ಮೂಲಕ ಮತಗಳನ್ನು ತೆಗೆಸಲು ಷಡ್ಯಂತ್ರ ಮಾಡಲಾಗಿತ್ತು ಎಂಬುವುದು ತಿಳಿದು ಬಂದಿದೆ ಎಂದರು.

ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗ ಕೆಲಸ ಮಾಡಬೇಕಾಗುತ್ತದೆ. 256 ಬೂತ್‌ಗಳಲ್ಲಿ 7,250 ಮತಗಳನ್ನು ಫಾರಂ 7 ದುರುಪಯೋಗದ ಮೂಲಕ ಡಿಲೀಟ್ ಮಾಡಿಸಿದ್ದರು. ಉತ್ತರ ಪ್ರದೇಶ, ಬಿಹಾರ, ದೆಹಲಿ, ಜಾರ್ಖಂಡ್ ರಾಜ್ಯಗಳ ಜನರ ಮೊಬೈಲ್‌ನಿಂದ ಈ ಅರ್ಜಿ ಸಲ್ಲಿಕೆಯಾಗುತ್ತವೆ. ಈ ಮತದಾರ ಪಟ್ಟಿಯಿಂದ ಹೆಸರು ರದ್ದಾದ 151 ಮತದಾರರು ಫೆ.23ರಂದು ದೂರು ನೀಡುತ್ತಾರೆ. ಅಂದೇ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುತ್ತದೆ. ಈ ಪ್ರಕರಣದ ತನಿಖೆ ವೇಳೆ ತನಿಖಾಧಿಕಾರಿಗಳು ತಮಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ 12 ಬಾರಿ ಪತ್ರ ಬರೆದಿದ್ದರೂ ಚುನಾವಣಾ ಆಯೋಗವು ಯಾವುದೇ ಮಾಹಿತಿ ನೀಡಿಲ್ಲ. ತನಿಖಾಧಿಕಾರಿಗಳು ಹೊರ ರಾಜ್ಯದ 9 ಮೊಬೈಲ್ ಸಂಖ್ಯೆಗಳನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರು ಮತದಾರ ಪಟ್ಟಿ ಸೇರಿದಂತೆ ಅನೇಕ ದಾಖಲೆಗಳನ್ನು ಸುಟ್ಟು ಹಾಕಿರುವ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಒಂದು ಮತ ಡಿಲೀಟ್ ಆದರೆ ಅದಕ್ಕೆ 80 ರೂಪಾಯಿ ಹಣ ನೀಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಚಿಲುಮೆ ಸಂಸ್ಥೆಯನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದನ್ನು ನಾವು ಬೆಳಕಿಗೆ ತಂದಿದ್ದೆವು. ಈ ಪ್ರಕರಣದ ತನಿಖಾ ವರದಿ ಶೀಘ್ರದಲ್ಲೇ ಬರಲಿದೆ ಎಂದು ಹೇಳಿದರು.

ಮೊದಲು ದಾಖಲೆ ನೀಡಲಿ :

ಮತಗಳ್ಳತನ ಆರೋಪಗಳ ಬಗ್ಗೆ ಕಾಂಗ್ರೆಸ್ ಎಲ್ಲೂ ಅಫಿಡವಿಟ್ ಸಲ್ಲಿಸಿಲ್ಲ ಚುನಾವಣಾ ಆಯೋಗ, ನ್ಯಾಯಾಲಯದ ಮೆಟ್ಟಿಲೂ ಏರಿಲ್ಲ ಯಾಕೆ ಎಂದು ಕೇಳಿದಾಗ, ನಾವು ಚುನಾವಣಾ ಅಯೋಗದ ಬಳಿ ಪೂರಕ ದಾಖಲೆಗಳನ್ನು ಕೇಳುತ್ತಿದ್ದೇವೆ. ಚುನಾವಣಾ ಆಯೋಗದ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರಬೇಕು. ಅವರು ಅಗತ್ಯ ಮಾಹಿತಿ ನೀಡಬೇಕು. ಆದರೆ ಅವರು ಈ ಮಾಹಿತಿ ನೀಡುತ್ತಿಲ್ಲ. ನಾವು ತನಿಖೆ ಮಾಡಿ ಸಂಗ್ರಹಿಸಿರುವ ಮಾಹಿತಿಗಳನ್ನು ಬಹಿರಂಗಪಡಿಸಿದ್ದೇವೆ. ನಾನೇ ಹೋಗಿ ಮಾಹಿತಿ ನೀಡುವಂತೆ ಅರ್ಜಿ ಕೊಟ್ಟಿದ್ದರೂ ಅವರೇ ನನ್ನ ಬಳಿ ದಾಖಲೆ ಕೇಳುತ್ತಿದ್ದಾರೆ. ಮಾಹಿತಿ ಕೇಳುವ ಹಕ್ಕು ನಮಗಿದೆ. ಆ ಮಾಹಿತಿಗಳನ್ನು ಕೊಡಬೇಕಾಗಿರುವುದು ಅವರ ಕರ್ತವ್ಯ. ಅವರು ಮೊದಲು ದಾಖಲೆ ನೀಡಲಿ. ಆಮೇಲೆ ನಾವು ಅಫಿಡವಿಟ್ ಸಲ್ಲಿಸುತ್ತೇವೆ ಎಂದರು.

ನಿಮ್ಮ ಆರೋಪಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕೇಳಿದಾಗ, ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. 300 ಸಂಸದರು ಕೇಂದ್ರ ಚುನಾವಣಾ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇವತ್ತಿನವರೆಗೂ ಅದರ ಬಗ್ಗೆ ಆಯೋಗ ಪ್ರತಿಕ್ರಿಯೆ ನೀಡಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿಲ್ಲ. ಹೊಸದಾಗಿ ಎಸ್ಐಆರ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿದರೆ ಯಾರ ಹೆಸರು ಆಚೆ ಬರಲಿದೆ ಎಂದು ಆಯೋಗದವರಿಗೂ ಗೊತ್ತಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಸವಾರಿ ಸಮಯದಲ್ಲಿ ಕಾಲು ಹಿಡಿಯಲು ಪ್ರಯತ್ನಿಸಿದ ರಾಪಿಡೋ ಚಾಲಕ: ಯುವತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...