Homeಚಳವಳಿಕರ್ನಾಟಕವೇ ಮೊದಲ ರಾಜ್ಯ: ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿ ಘೋಷಣೆ

ಕರ್ನಾಟಕವೇ ಮೊದಲ ರಾಜ್ಯ: ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿ ಘೋಷಣೆ

- Advertisement -
- Advertisement -

ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿಗೆ ಅವಕಾಶ ನೀಡುವುದಾಗಿ ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಆ ಮೂಲಕ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಇದಕ್ಕಾಗಿ 1977 ರ ಕರ್ನಾಟಕ ನಾಗರಿಕ ಸೇವೆಗಳ ಸಾಮಾನ್ಯ ನೇಮಕಾತಿ (ನಿಯಮಗಳು) ಗೆ ತಿದ್ದುಪಡಿ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ತಿಳಿಸಿದೆ.

ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದ ವರದಿಯನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದೆ ಮತ್ತು ಅದರ ಪ್ರಕಾರ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರರು ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಸಂಗಮ ಮತ್ತು ಇನ್ನಿತ್ತರ ಸರ್ಕಾರೇತರ ಸಂಸ್ಥೆಗಳು ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸುವಂತೆ ಹೈಕೋರ್ಟ್ ಕೇಳಿತ್ತು. ರಾಜ್ಯ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಮೀಸಲಾತಿಯನ್ನು ನೀಡುವ ಆದೇಶ ಹೊರಡಿಸಲಾಗಿದೆ.

ಶೇಕಡಾ ಒಂದರಷ್ಟು ಮೀಸಲಾತಿಯನ್ನು ನೇರ ನೇಮಕಾತಿಗಳ ಮೂಲಕ ಜಾರಿಗೊಳಿಸಲಾಗುವುದು. ಎ ದರ್ಜೆ ಸೇರಿದಂತೆ ಎಲ್ಲಾ ಸರ್ಕಾರಿ ಉದ್ಯೋಗಿಗಳಲ್ಲಿ ಅವರಿಗೆ ಮೀಸಲಾತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಪ್ರೈಡ್ ತಿಂಗಳು; ಸಮಸ್ಯೆಗಳ ಸಾಗರಕ್ಕೆ ಆತ್ಮಗೌರವವೇ ಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...