Homeಕರ್ನಾಟಕಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

ಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

- Advertisement -
- Advertisement -

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವವರೆಗೂ 10 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದ್ದಾರೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

ಸಧ್ಯ ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಇದ್ದು, ಈ ಹತ್ತು ಶಾಸಕರು ಸದನಕ್ಕೆ ಹಾಜರಾಗದಂತೆ ಅಮಾನತು ಮಾಡಲಾಗಿದೆ.

ಈ ಬಗ್ಗೆ ಸದನದಲ್ಲಿ ಸ್ಪೀಕರ್ ಖಾದರ್ ಮಾತನಾಡಿದ್ದು, ”ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ 10 ಶಾಸಕರ ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಮಾರ್ಷಲ್ಸ್‌ ಸದನದೊಳಗೆ ಬಂದು ಅಮಾನತುಗೊಂಡ ಶಾಸಕರನ್ನು ಹೊರಕಳಿಸಿದರು. ಅಷ್ಟರಲ್ಲಿ ಬಿಜೆಪಿಯ ಇತರ ಶಾಸಕರು ಅಮಾನತುಗೊಂಡ ಶಾಸಕರಿಗೆ ತಡೆಗೋಡೆಯಾಗಿ ನಿಂತರು. ಅಮಾನತುಗೊಂಡ ಶಾಸಕರನ್ನು ಮಾರ್ಷಲ್​​ಗಳು ಬಲವಂತವಾಗಿ ಹೊರಗೆ ಕಳುಹಿಸದಂತೆ ತಡೆಯಲು ಬಿಜೆಪಿಯ ಇತರ ಶಾಸಕರು ಪ್ರಯತ್ನಿಸಿದರು. ಆದರೆ ಮಾರ್ಷಲ್ಸ್‌ಗಳು ಮಾತ್ರ ಶಾಸಕರನ್ನು ಬಲವಂತವಾಗಿ ಹೊತ್ತುಕೊಂಡು ಹೋಗಿ ಹೊರಗೆ ಹಾಕಿದರು.

ಏನಿದು ಘಟನೆ?:

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...