Homeಕರ್ನಾಟಕಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

- Advertisement -
- Advertisement -

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದು ಧರ್ಮಸ್ಥಳ ಸೌಜನ್ಯ ಪ್ರಕರಣದ ಇಂಚಿಂಚೂ ಮಾಹಿತಿ ಹೊರಹಾಕಿದ ಸಮೀರ್ ಎಂಡಿ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ದೊಡ್ಡ ಸುದ್ದಿ ಮಾಡಿದ್ದರು. ದಿನ ಕಳೆದಂತೆ ಈ ವಿಡಿಯೋ ಸೆನ್ಸೇಷನ್ ಸೃಷ್ಟಿ ಮಾಡಿ ಕೋಟಿಗಟ್ಟಲೆ ವೀಕ್ಷಣೆ ಪಡೆದುಕೊಂಡಿತ್ತು. ಆ ನಂತರ ಕೆಲವು ದಿನಗಳ ಬಳಿಕ ಅದೇ ಧರ್ಮಸ್ಥಳದ ಕುರಿತಾಗಿ ಅಲ್ಲಿ ನಡೆದ ಕೊಲೆ ಅತ್ಯಾಚಾರ, ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಿಡಿಯೋ ಮಾಡಲಾಗಿತ್ತು.

ಈ ಎರಡನೇ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಧರ್ಮಸ್ಥಳ ಹಾರರ್‌ ಎಂಬ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಿದ್ದ ಸಮೀರ್‌ ಕೊಲೆಗಡುಕರು, ಅತ್ಯಾಚಾರಿಗಳ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ. ಆದರೆ ಇದೀಗ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಎಂಬ ವ್ಯಕ್ತಿಗಳು ಹತ್ತು ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಧರ್ಮಸ್ಥಳ ಹಾರರ್‌ ಹೆಸರಿನ ವಿಡಿಯೋವನ್ನು ಕೋರ್ಟ್‌ ಆದೇಶ ಉಲ್ಲೇಖಿಸಿ ಯೂಟ್ಯೂಬ್‌ ನಿಂದ ತೆಗೆದುಹಾಕಲಾಗಿತ್ತಾದರೂ, ಅದು ಭಾರತದಿಂದ ಹೊರಗಿನ ದೇಶಗಳಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆ. ಇದರ ಬೆನ್ನಲ್ಲೇ ಸಾಕ್ಷ್ಯ ನಾಶ ಎಂಬ ಎರಡನೇ ವಿಡಿಯೋವನ್ನು ಸಮೀರ್‌ ಬಿಡುಗಡೆ ಮಾಡಿದ್ದರು.

ಈ ವಿಡಿಯೋದಲ್ಲೂ ಕೊಲೆಗಡುಕರ, ಅತ್ಯಾಚಾರಿಗಳ ಹೆಸರುಗಳನ್ನು ಸಮೀರ್‌ ಉಲ್ಲೇಖಿಸಿರಲಿಲ್ಲ. ಆದರೆ ಡಿ.ಹರ್ಷೇಂದ್ರ ಕುಮಾರ್‌, ನಿಶ್ಚಲ್‌ ಡಿ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿರುವುದು ಅಚ್ಚರಿ ಮೂಡಿಸಿದೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದು, ವಿಡಿಯೋವನ್ನು ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಉಲ್ಲಂಘನೆ ನಂತರ 400,000 ಪ್ಯಾಲೆಸ್ಟೀನಿಯನ್ನರ  ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...