ಮಹಾರಾಷ್ಟ್ರದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ದಿನೇ ದಿನೇ ಅಧಿಕಗೊಳ್ಳುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ 8 ಜಿಲ್ಲೆಗಳು ಮಹಾರಾಷ್ಟ್ರದಲ್ಲಿಯೇ ಇವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ. ದೇಶದ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಹೆಚ್ಚು ಪಾಲು ಹೊಂದಿದೆ ಎಂದಿದ್ದಾರೆ.
“ದೇಶಾದ್ಯಂತ ಪುಣೆ, ಮುಂಬೈ, ನಾಗ್ಪುರ, ಥಾಣೆ, ನಾಸಿಕ್, ಔರಂಗಾಬಾದ್, ಬೆಂಗಳೂರು ನಗರ, ನಾಂದೇಡ್, ದೆಹಲಿ ಮತ್ತು ಅಹ್ಮದ್‌ನಗರಗಳು ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಾಗಿವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…
RT-PCR ಪರೀಕ್ಷೆಗಳನ್ನು ಹೆಚ್ಚಿಸಲು, ಸೋಂಕಿತರನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಪ್ರತ್ಯೇಕಿಸಲು, ಅವರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಲು ಅವಶ್ಯಕ ಕ್ರಮಗಳನ್ನು ರಾಜ್ಯ ಸರ್ಕಾರಗಳು ಮಾಡಬೇಕು ಎಂದಿದೆ. ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ಸಾರ್ವಜನಿಕರಿಗೆ ತಿಳಿಸುವುದು ಮತ್ತು ಲಸಿಕೆ ವಿತರಣೆಯನ್ನು ಸಮರ್ಪಕವಾಗಿ ಮಾಡಲು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಆದರೆ, ಇಲ್ಲಿಯವರೆಗೆ ನಾವು ಮಹಾರಾಷ್ಟ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಮನವಿ ಸ್ವೀಕರಿಸಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
Till date, we haven't received any specific request from Maharashtra Govt. In India, we do Universal Immunisation but even there we've not done door to door vaccination: Secy,Health Ministry on being asked if Maharashtra Govt has said that it wants to do door to door vaccination pic.twitter.com/FnrWffjg85
— ANI (@ANI) March 30, 2021
ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಜನ ಸೇರುವುದನ್ನು ತಡೆಯಲಾಗಿದೆ. ಕೊರೊನಾ ನಿಯಮಗಳ ಪಾಲನೆ ಕಡ್ಡಾಯ ಮಾಡಲಾಗಿದೆ.
ಜನರು ಕೊರೊನಾ ನಿಯಮಾವಳಿಗಳನ್ನು ಅನುಸರಿಸದ ಕಾರಣ ಲಾಕ್‌ಡೌನ್ ವಿಧಿಸುವ ಯೋಜನೆಯನ್ನು ಸಿದ್ಧಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಭಾನುವಾರ ಸಿಎಂ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿತ್ತು.
ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ


