Homeಮುಖಪುಟತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಶಾಲಿಮಾರ್ ಗಾರ್ಡನ್ ಸಹಾಯಕ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಸಿಂಗ್ ಮಾತನಾಡಿ, ಗುರುತಿಸಲಾದ 16 ಮಂದಿ ಮತ್ತು 25-30 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದ್ದಾರೆ.

ಹಿಂದೂ ರಕ್ಷಾ ದಳದ ರಾಷ್ಟ್ರೀಯ ಅಧ್ಯಕ್ಷ ಭೂಪೇಂದ್ರ ಚೌಧರಿ ಅಲಿಯಾಸ್ ಪಿಂಕಿ ಕೂಡ ಎಫ್‌ಐಆರ್‌ನಲ್ಲಿ ಹೆಸರಿಸಲಾದವರಲ್ಲಿ ಸೇರಿದ್ದಾರೆ ಎಂದು ಸಿಂಗ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹಿಂದುತ್ವ ಗುಂಪಿನ ಸದಸ್ಯರು ತಲವಾರು ಪ್ರದರ್ಶಿಸಿದ ಮತ್ತು ಹಂಚಿದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.

“ಬಾಂಗ್ಲಾದೇಶದಲ್ಲಿ ನಮ್ಮ ಹಿಂದೂ ಸಹೋದರರನ್ನು ಕೊಲ್ಲಲಾಗಿರುವ ರೀತಿ… ಹಿಂದೂಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕತ್ತಿಗಳನ್ನು ಇಟ್ಟುಕೊಳ್ಳಬೇಕು. ಪ್ರತಿಯೊಬ್ಬ ಜಿಹಾದಿಗೂ ಹಿಂದೂ ರಕ್ಷಾ ದಳವು ಅವರದೇ ಭಾಷೆಯಲ್ಲಿ ಪ್ರತಿಕ್ರಿಯಿಸುತ್ತದೆ” ಎಂದು ಚೌಧರಿ ಒಂದು ವಿಡಿಯೋದಲ್ಲಿ ಹೇಳುತ್ತಿರುವುದು ಇದೆ.

ಡಿಸೆಂಬರ್ 18ರಂದು ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ದೇವದೂಷಣೆಯ ಆರೋಪದ ಮೇಲೆ ಗುಂಪೊಂದು ಥಳಿಸಿ ಕೊಂದ ಕಾರ್ಖಾನೆಯ ಕಾರ್ಮಿಕ ದೀಪು ಚಂದ್ರ ದಾಸ್ ಅವರ ಹತ್ಯೆಯನ್ನು ಚೌಧರಿ ಉಲ್ಲೇಖಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಹಿಂದೂ ರಕ್ಷಾ ದಳದ ಸದಸ್ಯರು ಆಯುಧಗಳೊಂದಿಗೆ ಪ್ರದೇಶದಲ್ಲಿ ರ‍್ಯಾಲಿ ನಡೆಸುವಾಗ ಕೋಮುವಾದಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಗಲಭೆ, ಮಾರಕ ಆಯುಧಗಳಿಂದ ಗಲಭೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಹೆಚ್ಚಿನ ಆರೋಪಗಳನ್ನು ಸೇರಿಸಬಹುದು ಮತ್ತು ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಉಪ ಪೊಲೀಸ್ ಆಯುಕ್ತ ನಿಮಿಷ್ ಪಾಟೀಲ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಯಾವುದೇ ಸಂಘಟನೆಯು ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕದಡಲು ಪೊಲೀಸರು ಅನುಮತಿಸುವುದಿಲ್ಲ”ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ವಾಪಸ್ ಕಳುಹಿಸಿದ ದ್ರೌಪದಿ ಮುರ್ಮು: ಸ್ಟಾಲಿನ್ ಸರ್ಕಾರಕ್ಕೆ ಹಿನ್ನೆಡೆ

ಚೆನ್ನೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡು ವಿಶ್ವವಿದ್ಯಾಲಯದ ಮದ್ರಾಸ್ ತಿದ್ದುಪಡಿ ಮಸೂದೆಯನ್ನು ಹಿಂದಿರುಗಿಸಿದ್ದಾರೆ, ಇದು ರಾಜ್ಯ ಸರ್ಕಾರಕ್ಕೆ ತನ್ನ ಉಪಕುಲಪತಿಯನ್ನು ನೇಮಿಸಲು ಅಧಿಕಾರ ನೀಡುತ್ತದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಏಪ್ರಿಲ್...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್...

‘ಭಾರತ-ಪಾಕಿಸ್ತಾನ ಯುದ್ಧ ನಿಂತಿತು’: ನೆತನ್ಯಾಹು ಭೇಟಿಯ ಸಂದರ್ಭದಲ್ಲಿ ತಮ್ಮ ಶಾಂತಿಪ್ರಿಯ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್

ವಿಶ್ವ ನಾಯಕರೊಂದಿಗಿನ ಸಭೆಗಳ ಸಮಯದಲ್ಲಿ ಪರಮಾಣು ಶಸ್ತ್ರಸಜ್ಜಿತ ದಕ್ಷಿಣ ಏಷ್ಯಾದ ನೆರೆಹೊರೆಯವರ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ ಕೀರ್ತಿಯನ್ನು ಅಮೆರಿಕ ಅಧ್ಯಕ್ಷರು ಪಡೆದುಕೊಂಡಿದ್ದಾರೆ ಮತ್ತು ತಮ್ಮ ವಿದೇಶ ಪ್ರವಾಸಗಳ ಸಮಯದಲ್ಲಿ ಅದೇ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ. ಭಾರತಕ್ಕೆ...

ಮುಂಬೈ: ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ: ನಾಲ್ವರ ಸಾವು, 10 ಜನರಿಗೆ ಗಾಯ

ಮುಂಬೈನ ನಾಗರಿಕ ಸಾರಿಗೆ ಸಂಸ್ಥೆಯ ಬೆಸ್ಟ್‌ನ ಬಸ್ ಸೋಮವಾರ ರಾತ್ರಿ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ,10 ಮಂದಿ ಗಾಯಗೊಂಡಿದ್ದಾರೆ. ಡಿಸೆಂಬರ್ 9,...

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ...

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...