Homeಮುಖಪುಟವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ

- Advertisement -
- Advertisement -

ಬಿಹಾರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಿವೆ. ಚುನಾವಣಾ ಪ್ರಚಾರದಲ್ಲಿ ಜನರಿಗೆ ನೀಡುತ್ತಿರುವ ಭರವಸೆ, ಪ್ರಣಾಳಿಕೆಗಳ ಬಗ್ಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.

ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ವರ್ಷಕ್ಕೆ 10 ಲಕ್ಷ ಉದ್ಯೋಗಗಳ ಭರವಸೆಯನ್ನು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಅಸಾಧ್ಯ, ಇದನ್ನೂ ಯಾವ ನಾಯಕರು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

’ಅಷ್ಟು ಉದ್ಯೋಗಿಗಳಿಗೆ ಎಲ್ಲಿಂದ ಸಂಬಳ ನೀಡುತ್ತೀರಿ..? ನೀವು ನಕಲಿ ಹಣವನ್ನು ಮುದ್ರಿಸುತ್ತೀರಾ ಅಥವಾ ಯಾವ ಹಗರಣದಿಂದ ಜೈಲಿಗೆ ಹೋಗಬೇಕಾಯಿತೋ ಅಂತಹದ್ದೇ ಕೆಲಸ ಮಾಡುತ್ತೀರಾ..?’ ಎಂದು ಗೋಪಾಲಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ತೇಜಶ್ವಿ ಯಾದವ್ ಅವರ ತಂದೆ ಲಾಲು ಯಾದವ್ ಹೆಸರು ಹೇಳದೆ ಮೇವು ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ತೇಜಶ್ವಿ ಯಾದವ್ ಅನಾನುಭವಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. “ಉದ್ಯೋಗಗಳ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಈಡೇರಿಸಲು ಜ್ಞಾನ ಅಥವಾ ಅನುಭವ ಅವರಿಗಿಲ್ಲ ಎಂದಿದ್ದಾರೆ. ಉದ್ಯೋಗ ಕೊಡುವುದಾದರೆ, ಕೇವಲ 10 ಲಕ್ಷ ಏಕೆ? ಎಲ್ಲರಿಗೂ ಉದ್ಯೋಗ ನೀಡಿ ಎಂದು ಉಚಿತ ಸಲಹೆಯನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಮಾತಿಗೆ ತಿರುಗೇಟು ನೀಡಿರುವ ತೇಜಸ್ವಿ ಯಾದವ್, ’ನಾನು ಅಷ್ಟು ಅನಾನುಭವಿಯಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ. ನಾನು ಅಷ್ಟು ಅನಾನುಭವಿ ಮತ್ತು ಅಪಕ್ವವಾಗಿದ್ದರೆ, ಬಿಜೆಪಿ ನಾಯಕರು ನನ್ನನ್ನು 20 ಹೆಲಿಕಾಪ್ಟರ್‌ಗಳೊಂದಿಗೆ ಏಕೆ ಬೆನ್ನಟ್ಟುತ್ತಿದ್ದಾರೆ..? ಎಂದು ಚಾಟಿ ಬೀಸಿದ್ದಾರೆ.

“ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಅವರು ಜಲ-ಜೀವನ್-ಹರಿಯಾಲಿ ನೀತಿಗೆ, ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಇವುಗಳ ನಂತರ ಅವರು ಉದ್ಯೋಗ ನೀಡಲು ಹಣ ಎಲ್ಲಿದೆ ಎಂಬ ವ್ಯಂಗ್ಯದ ಕಾಮೆಂಟ್ ಮಾಡುತ್ತಾರೆ” ಎಂದು ತೇಜಶ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

“4.5 ಲಕ್ಷ ಉದ್ಯೋಗಗಳಿಗೆ ರಾಜ್ಯದ ಬಜೆಟ್‌ನಲ್ಲಿ ಅವಕಾಶವಿದೆ. ನೀತಿ ಆಯೋಗದ ಪ್ರಕಾರ ಬಿಹಾರದ ಪ್ರಗತಿಗೆ ಇನ್ನೂ 5.5 ಲಕ್ಷಕ್ಕಿಂತಲೂ ಅಧಿಕ ಉದ್ಯೋಗಗಳ ಅಗತ್ಯವಿದೆ. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ತೇಜಸ್ವಿ ಯಾದವ್ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತ ತೇಜಶ್ವಿ ಯಾದವ್ ಅವರ “10 ಲಕ್ಷ ಉದ್ಯೋಗಗಳು” ಎಂಬ ಭರವಸೆ ಬಗ್ಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ ಅಪಹಾಸ್ಯ ಮಾಡಿದ್ದಾರೆ.

ಆದರೆ ತೇಜಸ್ವಿ ಯಾದವ್ ಅವರ ಈ ಭರವಸೆ ಯುವಜನತೆಯಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಹೊಸ ವಿಶ್ವಾಸ ಹುಟ್ಟಿಸಿದೆ. ಇದರಿಂದ ಕಂಗಾಲಾಗಿರುವ ನಿತೀಶ್ ಕುಮಾರ್‌ ತಮ್ಮ ರ್‍ಯಾಲಿಗಳಲ್ಲಿ ಇದೇ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಸಾಧ್ಯವೆಂಬುದಿಲ್ಲ, ಚುನಾವಣೆಯಲ್ಲಿ ಗೆದ್ದರೆ ವರ್ಷಕ್ಕೆ 10 ಲಕ್ಷ ಉದ್ಯೋಗ ನೀಡುವುದಾಗಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಹೊಸ 243 ಸದಸ್ಯರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...