ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ
‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಹಿಂದಿನ ಯಾವುದೇ ಸರ್ಕಾರಿ ಉದ್ಯೋಗಗಳನ್ನು ಇಂತಹ “ಮಿಷನ್ ಮೋಡ್”ನಲ್ಲಿ ಹಿಂದೆಂದೂ ನೀಡಲಾಗಿಲ್ಲ ಎಂದು ಮೋದಿ ಹೇಳಿದ್ದು, ತಮ್ಮ ಸರ್ಕಾರದಲ್ಲಿ ಯುವಜನರನ್ನು ಕೇಂದ್ರವಾಗಿಟ್ಟು ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ದೇಶವು ಎಲ್ಲಾ ಕ್ಷೇತ್ರಗಳಲ್ಲಿ ನಿಜವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ‘ಯುವ ಪ್ರತಿಭೆ’ಯನ್ನು ಅನ್ವೇಷಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ. ಬಾಹ್ಯಾಕಾಶದಿಂದ ರಕ್ಷಣೆವರೆಗೆ, ಪ್ರವಾಸೋದ್ಯಮದಿಂದ ಆರೋಗ್ಯ ಕ್ಷೇತ್ರದವರೆಗೆ, ಇಂದು ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲುಗಲ್ಲು ಮುಟ್ಟಿತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರೋಜ್‌ಗಾರ್ ಮೇಳದಲ್ಲಿ ನೇಮಕಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವುದನ್ನು ಎತ್ತಿತೋರಿಸಿದ ಮೋದಿ, ಅವರ ಸಾಧನೆಗಳು ಇತರ ಮಹಿಳೆಯರಿಗೆ ಸ್ಫೂರ್ತಿಯಾಗಲಿವೆ ಎಂದು ಹೇಳಿದ್ದಾರೆ. “ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬಿಯಾಗಲು ಸಬಲೀಕರಣಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.
ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನಕ್ಕೆ ಸಾಕಷ್ಟು ಸಹಾಯ ಮಾಡಿದ್ದು, ‘ಪ್ರಧಾನಿ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುತೇಕ ಮಾಲೀಕರಾಗಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವ ಮೂಲಕ ಯುವಜನರ ಅಭಿವೃದ್ಧಿಗೆ ರಾಷ್ಟ್ರೀಯ ಶಿಕ್ಷಣ ನೀತಿಯು ಸಹಾಯ ಮಾಡಿದೆ ಎಂದು ಸಮರ್ಥಿಸಿಕೊಂಡ ಪ್ರಧಾನಿ ಮೋದಿ,”ಯುವಕರು 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದೆಂದು ಖಚಿತಪಡಿಸಿಕೊಳ್ಳುವ ಮೂಲಕ ಉದ್ಯೋಗಕ್ಕೆ ಭಾಷೆಯು ಅಡ್ಡಿಯಾಗುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿದೆ” ಎಂದು ಹೇಳಿದ್ದಾರೆ.
ಅದಾಗ್ಯೂ, ಪ್ರಧಾನಿ ಮೋದಿ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದ್ದು, “ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದವರು ಒಂದುವರೆ ವರ್ಷಗಳಿಗೆ 10 ಲಕ್ಷ ಉದ್ಯೋಗ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, 2 ಕೋಟಿ ಉದ್ಯೋಗ ಎಲ್ಲಿ ಹೋಯಿತು?” ಎಂದು ಯುವ ಪತ್ರಕರ್ತ ಹಾರಿಸ್ ಅವರು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ
ಯುವ ಹೋರಾಟಗಾರ ಕೃಷ್ಣ ಪ್ರತಿಕ್ರಿಯಿಸಿ, “ತನ್ನ ಭರವಸೆಗಳನ್ನು ಉಳಿಸಿಕೊಳ್ಳಲು ಆಗದೆ ದೇಶದ ಯುವಜನರಿಗೆ ಮೋಸ ಮಾಡಿದ ಪ್ರಧಾನಿ ಮೋದಿ ನಾಚಿಕೆ ಪಟ್ಟಕೊಳ್ಳಬೇಕಿತ್ತು. ಆದರೆ ಇವರು 10 ಲಕ್ಷ ಉದ್ಯೋಗ ನೀಡಿದ್ದೇವೆ ಎಂದು ಹೆಮ್ಮಪಟ್ಟುಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ
‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ


