Homeಮುಖಪುಟಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಭರವಸೆ ನೀಡಿದ್ದ ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಪ್ರಶ್ನಿಸಿದ ಯುವ ಜನರು

- Advertisement -
- Advertisement -

ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಹಿಂದಿನ ಯಾವುದೇ ಸರ್ಕಾರಿ ಉದ್ಯೋಗಗಳನ್ನು ಇಂತಹ “ಮಿಷನ್ ಮೋಡ್”ನಲ್ಲಿ ಹಿಂದೆಂದೂ ನೀಡಲಾಗಿಲ್ಲ ಎಂದು ಮೋದಿ ಹೇಳಿದ್ದು, ತಮ್ಮ ಸರ್ಕಾರದಲ್ಲಿ ಯುವಜನರನ್ನು ಕೇಂದ್ರವಾಗಿಟ್ಟು ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ದೇಶವು ಎಲ್ಲಾ ಕ್ಷೇತ್ರಗಳಲ್ಲಿ ನಿಜವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ‘ಯುವ ಪ್ರತಿಭೆ’ಯನ್ನು ಅನ್ವೇಷಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ. ಬಾಹ್ಯಾಕಾಶದಿಂದ ರಕ್ಷಣೆವರೆಗೆ, ಪ್ರವಾಸೋದ್ಯಮದಿಂದ ಆರೋಗ್ಯ ಕ್ಷೇತ್ರದವರೆಗೆ, ಇಂದು ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲುಗಲ್ಲು ಮುಟ್ಟಿತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರೋಜ್‌ಗಾರ್ ಮೇಳದಲ್ಲಿ ನೇಮಕಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವುದನ್ನು ಎತ್ತಿತೋರಿಸಿದ ಮೋದಿ, ಅವರ ಸಾಧನೆಗಳು ಇತರ ಮಹಿಳೆಯರಿಗೆ ಸ್ಫೂರ್ತಿಯಾಗಲಿವೆ ಎಂದು ಹೇಳಿದ್ದಾರೆ. “ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬಿಯಾಗಲು ಸಬಲೀಕರಣಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನಕ್ಕೆ ಸಾಕಷ್ಟು ಸಹಾಯ ಮಾಡಿದ್ದು, ‘ಪ್ರಧಾನಿ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುತೇಕ ಮಾಲೀಕರಾಗಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವ ಮೂಲಕ ಯುವಜನರ ಅಭಿವೃದ್ಧಿಗೆ ರಾಷ್ಟ್ರೀಯ ಶಿಕ್ಷಣ ನೀತಿಯು ಸಹಾಯ ಮಾಡಿದೆ ಎಂದು ಸಮರ್ಥಿಸಿಕೊಂಡ ಪ್ರಧಾನಿ ಮೋದಿ,”ಯುವಕರು 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದೆಂದು ಖಚಿತಪಡಿಸಿಕೊಳ್ಳುವ ಮೂಲಕ ಉದ್ಯೋಗಕ್ಕೆ ಭಾಷೆಯು ಅಡ್ಡಿಯಾಗುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿದೆ” ಎಂದು ಹೇಳಿದ್ದಾರೆ.

ಅದಾಗ್ಯೂ, ಪ್ರಧಾನಿ ಮೋದಿ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದ್ದು, “ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದವರು ಒಂದುವರೆ ವರ್ಷಗಳಿಗೆ 10 ಲಕ್ಷ ಉದ್ಯೋಗ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, 2 ಕೋಟಿ ಉದ್ಯೋಗ ಎಲ್ಲಿ ಹೋಯಿತು?” ಎಂದು ಯುವ ಪತ್ರಕರ್ತ ಹಾರಿಸ್ ಅವರು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

ಯುವ ಹೋರಾಟಗಾರ ಕೃಷ್ಣ ಪ್ರತಿಕ್ರಿಯಿಸಿ, “ತನ್ನ ಭರವಸೆಗಳನ್ನು ಉಳಿಸಿಕೊಳ್ಳಲು ಆಗದೆ ದೇಶದ ಯುವಜನರಿಗೆ ಮೋಸ ಮಾಡಿದ ಪ್ರಧಾನಿ ಮೋದಿ ನಾಚಿಕೆ ಪಟ್ಟಕೊಳ್ಳಬೇಕಿತ್ತು. ಆದರೆ ಇವರು 10 ಲಕ್ಷ ಉದ್ಯೋಗ ನೀಡಿದ್ದೇವೆ ಎಂದು ಹೆಮ್ಮಪಟ್ಟುಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...