Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...