ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಸೋಮವಾರ ಗೋವಾದ ಮಾಪುಸಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರನ್ನು ಉತ್ತರ ಗೋವಾದ ಕೊಲ್ವಾಲೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಸುಪ್ರೀಂ ಕೋರ್ಟ್ ತೇಜ್‌ಪಾಲ್ ಅವರಿಗೆ ಶರಣಾಗತಿಯಿಂದ ವಿನಾಯಿತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. … Continue reading ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ