Homeಮುಖಪುಟ10 ವರ್ಷದ ಶಾಲಾ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಶಿಕ್ಷಕ: ವಿಡಿಯೋ ವೈರಲ್

10 ವರ್ಷದ ಶಾಲಾ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಶಿಕ್ಷಕ: ವಿಡಿಯೋ ವೈರಲ್

- Advertisement -
- Advertisement -

ಮುಜಪ್ಪರ್‌ ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ಶಿಕ್ಷಕಿಯ ವಿಡಿಯೋ ವೈರಲ್‌ ಬಳಿಕ ಘಟನೆ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಘಟನೆಯ ನೆನಪು ಮಾಸುವ ಮೊದಲೇ ಇಂತದ್ದೇ ಘಟನೆಯೊಂದು ಪಂಜಾಬ್‌ನಿಂದ ವರದಿಯಾಗಿದೆ.

10 ವರ್ಷದ ಶಾಲಾ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಅಮಾನುಷವಾಗಿ ಥಳಿಸಿದ್ದು, ಈ ವೇಳೆ ಮತ್ತಿಬ್ಬರು ವಿದ್ಯಾರ್ಥಿಗಳಿಗೆ ಬಾಲಕನ ಕೈಕಾಲುಗಳನ್ನು ಗಟ್ಟಿಯಾಗಿ ಹಿಡಿದುಕೊಳ್ಳುವಂತೆ ಶಿಕ್ಷಕ ಸೂಚಿಸಿದ್ದಾನೆ.

ಈ ಆಘಾತಕಾರಿ ಘಟನೆ ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಮುಸ್ಲಿಂ ಕಾಲೋನಿಯಲ್ಲಿರುವ ಬಾಲ ವಿಕಾಸ ಶಾಲೆಯಲ್ಲಿ ನಡೆದಿದೆ. ಘಟನೆ ಸೆ.19ರಂದ ನಡೆದಿದೆ ಎನ್ನಲಾಗಿದ್ದು, ಘಟನೆಯ ವಿಡಿಯೋ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ ಶಾಲೆಯ ವಿದ್ಯಾರ್ಥಿಯೊಬ್ಬರು ವಿಡಿಯೋವನ್ನು ರೆಕಾರ್ಡ್ ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ.

ವಿದ್ಯಾರ್ಥಿಯ ಪೆನ್ಸಿಲ್ ತಪ್ಪಾಗಿ ಮತ್ತೊಬ್ಬ ವಿದ್ಯಾರ್ಥಿಗೆ ತಾಗಿದ ಕಾರಣ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ್ದಾರೆ. ಶಾಲೆಗೆ ಹೋದ ಎರಡನೇ ದಿನವೂ ಶಿಕ್ಷಕ ಬಾಲಕನಿಗೆ ಥಳಿಸಿದ್ದಾರೆ. ಘಟನೆಯ ಬಗ್ಗೆ ಮನೆಯಲ್ಲಿ ತಿಳಿಸಿದರೆ, ಪೊಲೀಸರಿಗೆ ದೂರು ನೀಡಿದರೆ ಬಾಲಕನಿಗೆ ಶಾಲೆಯಿಂದ ಹೊರ ಹಾಕುವುದಾಗಿ ಬೆದರಿಸಿದ್ದಾರೆ.

ಆದರೆ ಸೆ.19ರಂದು ಬಾಲಕ ನಡೆಯಲು ಕಷ್ಟಪಡುತ್ತಿರುವುದನ್ನು ಬಾಲಕನ ತಾಯಿ ಗಮನಿಸಿದ್ದರು. ಏನಾಯಿತು ಎಂದು ಬಾಲಕನಿಗೆ  ಕೇಳಿದಾಗ ಆತ ನಡೆದ ಘಟನೆಯನ್ನು ವಿವರಿಸಿದ್ದಾನೆ. ಸತತ ಎರಡು ದಿನ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ್ದಾನೆಂದು ತಿಳಿದ ತಾಯಿ, ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಿಸಿ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ವಿಡಿಯೋ ಆಧರಿಸಿ ಆರೋಪಿ ಶಿಕ್ಷಕ ಭಗವಾನ್‌ನನ್ನು ಪೊಲೀಸರು ಬಂಧಿಸಿದ್ದು, ಭಗವಾನ್ ವಿರುದ್ಧ ಸೆಕ್ಷನ್ 323, 342, 506 ಐಪಿಸಿ ಅಡಿಯಲ್ಲಿ ಮತ್ತು ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 75, 82ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಸಂಸತ್ ಭವನದ ಶಂಕುಸ್ಥಾಪನೆಗೆ ‘ಅಸ್ಪೃಶ್ಯ’ ಎಂದು ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನಿಸಿರಲಿಲ್ಲ: ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...