Homeಮುಖಪುಟಒಡಿಶಾ: ಶಾಲಾ ಶಿಕ್ಷಕ ಕೊಟ್ಟ ಶಿಕ್ಷೆಗೆ ಪ್ರಾಣ ಕಳೆದುಕೊಂಡ ಬಾಲಕ

ಒಡಿಶಾ: ಶಾಲಾ ಶಿಕ್ಷಕ ಕೊಟ್ಟ ಶಿಕ್ಷೆಗೆ ಪ್ರಾಣ ಕಳೆದುಕೊಂಡ ಬಾಲಕ

- Advertisement -
- Advertisement -

ಒಡಿಶಾದ ಜಾಜ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ನಾಲ್ಕನೇ ತರಗತಿ ವಿದ್ಯಾರ್ಥಿಗೆ ಬಸ್ಕಿ ತೆಗೆಯುವಂತೆ ಶಿಕ್ಷೆ ನೀಡಿದ್ದು, ಈ ವೇಳೆ ಬಾಲಕ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಓರಳಿಯ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ರುದ್ರ ನಾರಾಯಣ ಸೇತಿ ಮೃತ ಬಾಲಕ.

ಮಂಗಳವಾರ ವಿದ್ಯಾರ್ಥಿಯು ಶಾಲೆಯ ಆವರಣದಲ್ಲಿ ನಾಲ್ವರು ಇತರ ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಶಿಕ್ಷಕ ಬಾಲಕನಿಗೆ ಕರೆದು ಬಸ್ಕಿ ತೆಗೆಯುವ ಶಿಕ್ಷೆಯನ್ನು ನೀಡಿದ್ದಾರೆ. ಬಸ್ಕಿ ತೆಗೆಯುವ ವೇಳೆ ಬಾಲಕ  ಕುಸಿದು ಬಿದ್ದಿದ್ದಾನೆ.

ತಕ್ಷಣ ಸಮೀಪದ ರಸೂಲ್‌ಪುರ ಬ್ಲಾಕ್‌ನ ಓರಾಲಿ ಗ್ರಾಮದ ನಿವಾಸಿಗಳಾದ ಆತನ ಪೋಷಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಬಾಲಕನಿಗೆ ಸಮುದಾಯ ಕೇಂದ್ರಕ್ಕೆ ದಾಖಲಿಸಿ ಗಂಭೀರವಾಗಿದ್ದ ಕಾರಣ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ವೈದ್ಯರು ಬಾಲಕ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ.

ರಸುಲ್‌ಪುರ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ನೀಲಾಂಬರ್ ಮಿಶ್ರಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಲ್ಲಿಯವರೆಗೆ ಯಾವುದೇ ದೂರು ಸ್ವೀಕರಿಸಿಲ್ಲ. ನಮಗೆ ದೂರು ಬಂದರೆ ನಾವು ತನಿಖೆಯನ್ನು ಪ್ರಾರಂಭಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕುವ್ಕಿಯಾ ಪೊಲೀಸ್ ಠಾಣೆಯ ಅಧಿಕಾರಿ ಶ್ರೀಕಾಂತ್ ಬಾರಿಕ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆ ಕುರಿತು ಯಾರಿಂದಲೂ ದೂರು ಸ್ವೀಕರಿಸಿಲ್ಲ. ಮಗುವಿನ ತಂದೆ ಅಥವಾ ಶಾಲೆಯವರು ಎಫ್‌ಐಆರ್ ದಾಖಲಿಸಿಲ್ಲ. ದೂರು ನೀಡಿದರೆ ಪ್ರಕರಣ ದಾಖಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಸೂಲ್‌ಪುರ ಬ್ಲಾಕ್ ಸಹಾಯಕ ಶಿಕ್ಷಣಾಧಿಕಾರಿ ಪ್ರವಂಜನ್ ಪಾಟಿ ಶಾಲೆಗೆ ಭೇಟಿ ನೀಡಿ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.

ಇದನ್ನು ಓದಿ: ಬಿಜೆಪಿಗೆ ಮತ ಹಾಕದವರಿಗೆ ನೀರಿಲ್ಲ: ಮಧ್ಯಪ್ರದೇಶದಲ್ಲಿ ಆಘಾತಕಾರಿ ಬೆಳವಣಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...