Homeಕರ್ನಾಟಕ'ಅನ್ನಭಾಗ್ಯ' ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

‘ಅನ್ನಭಾಗ್ಯ’ ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ‘ಅನ್ನಭಾಗ್ಯ’ ಜಾರಿಯಾಗಿ ಇಂದಿಗೆ 10ವರ್ಷಗಳು ಕಳೆದಿವೆ. ರಾಜ್ಯದ ಒಬ್ಬನೇ ಒಬ್ಬ ವ್ಯಕ್ತಿ ಕೂಡ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದರು.

ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಂದಿಗೆ 10ವರ್ಷ ಕಳೆದಿರುವ ಹಿನ್ನೆಲೆ ಇಂದಿನಿಂದ ಪ್ರತಿ ವ್ಯಕ್ತಿಗೆ ತಲಾ 5 ಕೆಜಿ ಅಕ್ಕಿ ಹಾಗೂ 170ರೂ. ನೀಡಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ”ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.

”ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ” ಎಂದು ತಿಳಿಸಿದ್ದಾರೆ.

”ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ” ಎಂದಿದ್ದಾರೆ.

”ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು” ಎಂದು ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಕೂಡ ಮಾಎಇರುವ ಸಿದ್ದರಾಮಯ್ಯ, ”ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...