Homeಮುಖಪುಟತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

ತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

- Advertisement -
- Advertisement -

ಮುಖೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಪತ್ತೆ ಪ್ರಕರಣದಲ್ಲಿ ವಜಾಗೊಂಡಿರುವ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್‌ ಸಿಂಗ್, ಗೃಹ ಸಚಿವ ಅನಿಲ್ ದೇಶ್‌ಮುಖ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವುದರಿಂದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಸಂಪುಟದಿಂದ ಹೊರ ಹೋಗಬೇಕಾಗುತ್ತದೆ ಎಂದು ರಾಜ್ಯದ ಆಡಳಿತ ಒಕ್ಕೂಟದ ಉನ್ನತ ಮುಖಂಡರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಇದೇ ಅಭಿಪ್ರಾಯದಲ್ಲಿದ್ದು, ಇಂದು (ಭಾನುವಾರ) ಸಂಜೆ ಶಿವಸೇನೆ ಮುಖಂಡರು ಮತ್ತು ಮಿತ್ರಪಕ್ಷ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಡುವೆ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖೇಶ್ ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನ ಪ್ರಕರಣದ ಭದ್ರತಾ ತನಿಖೆಯಲ್ಲಿ ಲೋಪ ಎಸಗಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಸ್ಥಾನದಿಂದ ವಜಾಗೊಳಿಸಲ್ಪಟ್ಟ ಪರಮ್ ಬೀರ್ ಸಿಂಗ್,  ಗೃಹ ಸಚಿವರು “ತಿಂಗಳಿಗೆ 100 ಕೋಟಿ ರೂಪಾಯಿ ಲಂಚ ಸಂಗ್ರಹಿಸುವ ಗುರಿ ಹೊಂದಿದ್ದಾರೆ” ಎಂದು ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ಗೃಹ ಸಚಿವರ ಮೇಲಿನ ಭ್ರಷ್ಟಾಚಾರ ಆರೋಪ ಈಗ ಮೈತ್ರಿಯಲ್ಲಿ ತಳಮಳಕ್ಕೆ ಕಾರಣವಾಗಿದ್ದು, ದೇಶಮುಖ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ ಎನ್ನಲಾಗಿದೆ. ಎನ್‌ಸಿಪಿ ಪಕ್ಷದ ದೇಶ್‌ಮುಖ್ ರಾಜೀನಾಮೆಗೆ ಮೈತ್ರಿ ಪಕ್ಷ ಕಾಂಗ್ರೆಸ್ ಕೂಡ ಒತ್ತಾಯಿಸಿದೆ ಎನ್ನಲಾಗಿದ್ದು, ಇಂದು (ಭಾನುವಾರ) ಸಂಜೆ ದೇಶ್‌ಮುಖ್ ಭವಿಷ್ಯ ತಿಳಿಯಲಿದೆ.

ಆರೋಪಗಳನ್ನು ನಿರಾಕರಿಸಿರುವ ದೇಶ್‌ಮುಖ್, ಪರಮ್ ಬೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಆದರೆ ಅವರನ್ನು ತೆಗೆದುಹಾಕುವಂತೆ ರಾಜ್ಯದ ಪ್ರತಿಪಕ್ಷ ಬಿಜೆಪಿ ಕರೆ ನೀಡಿದೆ.

ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ, ಮುಕೇಶ್ ಅಂಬಾನಿ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಸಚಿನ್ ವಾಜೆ ಸೇರಿದಂತೆ ಹಲವಾರು ಅಧಿಕಾರಿಗಳನ್ನು ಸುಲಿಗೆ ದಂಧೆ ನಡೆಸುವಂತೆ ಸಚಿವರು ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

ಸಚಿವರು ಮುಂಬೈ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 100 ಕೋಟಿ ರೂಪಾಯಿ ಕಲೆಕ್ಷನ್ ಗುರಿಯನ್ನು ನಿಗದಿಪಡಿಸಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಹುಕ್ಕಾ ಪಾರ್ಲರ್‌ಗಳಿಂದ ಹಣವನ್ನು ಸಂಗ್ರಹಿಸಲು ಸೂಚಿಸಿದ್ದರು. ಫೆಬ್ರವರಿಯಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರು ಹಲವಾರು ಸಂದರ್ಭಗಳಲ್ಲಿ ಪೊಲೀಸ್ ಅಧಿಕಾರಿಗಳಿಗೆ ಪ್ರಕರಣಗಳನ್ನು ಹೇಗೆ ನಿರ್ವಹಿಸಬೇಕು ಮತ್ತು ಆರೋಪಗಳನ್ನು ಹೇಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದರು, ಆಗಾಗ್ಗೆ ತಮ್ಮನ್ನು ಮತ್ತು ಇತರ ಹಿರಿಯರನ್ನು “ಬೈಪಾಸ್” ಮಾಡಲು ಪೊಲೀಸ್ ಅಧಿಕಾರಿಗಳನ್ನು ಅವರ ಮನೆಗೆ ಕರೆಸಿಕೊಳ್ಳುತ್ತ ಬಂದಿದ್ದರು ಎಂದು ಪತ್ರದಲ್ಲಿ ಆರೋಪಿಸಲಾಗಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...