Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...