Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...