Homeಅಂತರಾಷ್ಟ್ರೀಯ'ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ'; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

‘ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ’; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ, ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ ಜೊಹ್ರಾನ್ ಮಮ್ದಾನಿ ಅವರ ಗೆಲುವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ. ಜೊಹ್ರಾನ್ ಮಮ್ದಾನಿ ಅವರನ್ನು “ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ” ಎಂದು‌ ಟ್ರಂಪ್‌ ಜರೆದಿದ್ದಾರೆ.

ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಜ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಜೊಹ್ರಾನ್ ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದಾರೆ.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಜೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಮೇಯರ್‌ ಅಂತಿಮ ಆಯ್ಕೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಜೊಹ್ರಾನ್ ಅವರು ಮಾಜಿ ಮೇಯರ್, ರಿಪಬ್ಲಿಕನ್ ಪಕ್ಷದ ಎರಿಕ್ ಆ್ಯಡಮ್ಸ್ ಅವರನ್ನು ಎದುರಿಸಬೇಕಿದೆ. ಜುಲೈ 1ರಂದು ಅಧಿಕೃತ ಫಲಿತಾಂಶ ಹೊರಬೀಳಲಿದೆ.

ನ್ಯೂಯಾರ್ಕ್ ನಗರದ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ನ್ಯೂಯಾರ್ಕ್ ನಗರದ ಮೇಯರ್ ಪ್ರಾಥಮಿಕ ಚುನಾವಣೆಗೆ ಅನುಮತಿ ನೀಡಿದ ಬಳಿಕ, ಜೊಹ್ರಾನ್ ಮಮ್ದಾನಿ ಅವರು ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎಣಿಕೆಯಾದ ಶೇ.90 ರಷ್ಟು ಮತಗಳ ಪೈಕಿ, ಜೊಹ್ರಾನ್ ಮಮ್ದಾನಿ ಶೇ. 43.5ರಷ್ಟು ಮತಗಳನ್ನು ಗಳಿಸಿದ್ದಾರೆ.‌ ಮಮ್ದಾನಿ ಅಂತಿಮ ರೇಸ್‌ನಲ್ಲಿ ಗೆದ್ದರೆ, ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಲಿದ್ದಾರೆ.

ಕ್ವೀನ್ಸ್‌ನ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಮತ್ತು ಸ್ಟೇಟ್‌ ಅಸೆಂಬ್ಲಿ ಸದಸ್ಯರಾಗಿರುವ ಜೊಹ್ರಾನ್ ಅವರು ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಪುತ್ರ.

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...