ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಹತ್ವದ ಘೋಷಣೆ ಮಾಡಿದ್ದಾರೆ.
ಈಗ ಇರುವ ಹಣದುಬ್ಬರ ಪರಿಹಾರ ಶಿಬಿರಗಳನ್ನು ನೋಡಿಕೊಂಡು ಸಾರ್ವಜನಿಕರೊಂದಿಗೆ ಮಾತನಾಡಿದ ಸಿಎಂ ಗೆಹ್ಲೋಟ್ ಅವರು ವಿದ್ಯುತ್ ಬಿಲ್ ನಲ್ಲಿ ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
महंगाई राहत शिविरों के अवलोकन व जनता से बात करने पर फीडबैक आया कि बिजली बिलों में मिलने वाली स्लैबवार छूट में थोड़ा बदलाव किया जाए.
– मई महीने में बिजली बिलों में आए फ्यूल सरचार्ज को लेकर भी जनता से फीडबैक मिला जिसके आधार पर बड़ा फैसला किया है.
–
– 100 यूनिट प्रतिमाह तक बिजली… pic.twitter.com/z27tJRuyaf— Ashok Gehlot (@ashokgehlot51) May 31, 2023
ಮೇ ತಿಂಗಳಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.
ಈಗ ಹೊಸ ನಿಯಮಗಳ ಪ್ರಕಾರ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. ಅವರು ಮುಂಗಡವಾಗಿ ಯಾವುದೇ ಬಿಲ್ ಪಾವತಿಸಬೇಕಾಗಿಲ್ಲ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬಗಳು ಅವರು 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚಿಗೆ ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ..
ಕೆಲವು ಕುಟುಂಬಗಳು ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುತ್ತವೆ ಅಂತಹ ಕುಟುಂಬಗಳಿಗೂ ಈ ರಿಯಾಯಿತಿ ನೀಡಲಾಗಿದೆ. ಇದರಲ್ಲಿ, ಮೊದಲ 100 ಯುನಿಟ್‌ಗಳು ಉಚಿತವಾಗಿರುತ್ತದೆ. ಆದರೆ ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ.
ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್‌ನಿಂದ ಜನರ ಮನಗೆಲ್ಲಲು ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ವಿದ್ಯುತ್ ಅನ್ನು ಎಷ್ಟೇ ಬಳಕೆ ಮಾಡಿದರೂ, ಬಳಕೆದಾರರು ಮೊದಲ 100 ಯೂನಿಟ್‌ಗಳಿಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ.


