ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಮಿಥಾಲಿ ರಾಜ್ ಪಾತ್ರರಾಗಿದ್ದಾರೆ. ಲಖನೌದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ಈ ದಾಖಲೆ ಬರೆದಿದ್ದಾರೆ. ಈ ದಾಖಲೆ ಮಾಡಿದ ಮರುಕ್ಷಣವೇ ಮಿಥಾಲಿ ಔಟ್ ಆದರು.
ಬಲಗೈ ಬ್ಯಾಟರ್ ಮತ್ತು ಭಾರತೀಯ ಏಕದಿನ ಮಹಿಳಾ ತಂಡದ ನಾಯಕಿಯಾಗಿರುವ ಮಿಥಾಲಿ ರಾಜ್, ಈ ಪಂದ್ಯದಲ್ಲಿ 36 ರನ್ ಗಳಿಸಿ ಔಟಾದರು. ಇದುವರೆಗೂ ಏಕದಿನ ಪಂದ್ಯಗಳಲ್ಲಿ 6974 ರನ್ ಗಳಿಸಿದ್ದರೆ, ಟಿ-20ಯಲ್ಲಿ 2364 ರನ್ ಗಳಿಸಿದ್ದಾರೆ. 10 ಟೆಸ್ಟ್ ಪಂದ್ಯಗಳಲ್ಲಿ 663 ರನ್ ಗಳಿಸಿ ಈ ಸಾಧನೆ ಮಾಡಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ವಿಭಾಗಗಳೂ (ಏಕದಿನ, ಟೆಸ್ಟ್ ಮತ್ತು ಟಿ-20) ಸೇರಿದಂತೆ 10,000 ರನ್ ಗಳಿಸಿದ ಎರಡನೇ ಆಟಗಾರ್ತಿ ಮಿಥಾಲಿ ರಾಜ್. ಇವರನ್ನು ಬಿಟ್ಟರೆ ಇಂಗ್ಲೆಂಡ್‌ನ ಷಾರ್ಲೆಟ್ ಎಡ್ವರ್ಡ್ ಈ ಸಾಧನೆ ಮಾಡಿದ ಮತ್ತೊಬ್ಬ ಮಹಿಳೆಯಾಗಿದ್ದಾರೆ.
ಜೂನ್ 1999 ರಲ್ಲಿ ಐರ್ಲೆಂಡ್ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಮಿಥಾಲಿ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು.
ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು ‘ಲೈಕ್’ ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!


