Homeಕರ್ನಾಟಕಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಹಿರಿಯ ನಾಯಕ...

ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ

ಜನವರಿ 26ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರವನ್ನು ನಾನೇ ತಲೆಯಲ್ಲಿ ಹೊತ್ತುಕೊಂಡು ಮೆರವಣಿಗೆ ಹೊರಡುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದು ನನಗೆ ತುಂಬಾ ನೋವುಂಟು ಮಾಡಿದ್ದು, ಆ ದಿನ ಇಡೀ ರಾತ್ರಿ ನಾನು ಕಣ್ಣೀರು ಸುರಿಸಿದ್ದೆ ಎಂದು ಒಕ್ಕೂಟ ಸರ್ಕಾರದ ಮಾಜಿ ಸಚಿವ, ಹಿರಿಯ ನಾಯಕ ಬಿ. ಜನಾರ್ಧನ ಪೂಜಾರಿ ಹೇಳಿದ್ದರೆ. ಬಿಜೆಪಿ ಸರ್ಕಾರದ ಧೋರಣೆ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಗುರುಗಳ ಟ್ಯಾಬ್ಲೊ ಮೆರವಣಿಗೆ ಮಾಡುವುದಾಗಿ ಅವರು ಹೇಳಿದ್ದಾರೆ.

ವಿಡಿಯೊ ಸಂದೇಶದಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, “ಜನವರಿ 26 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ದ ಚಿತ್ರವನ್ನು ನಿರಾಕರಣೆ ಮಾಡಿದ್ದು ನನಗೆ ತುಂಬಾ ನೋವುಂಟು ಮಾಡಿದೆ. ಆ ದಿನ ನಾನು ನಿದ್ದೆಯೆ ಮಾಡಿಲ್ಲ, ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

“ನಾರಾಯಣ ಗುರುಗಳು ಯಾವು ಜಾತಿಗೂ, ಯಾವ ಸಮಾಜಕ್ಕೂ, ಯಾವೊಂದು ಧರ್ಮಕ್ಕೂ ಸೇರಿದವರಲ್ಲ. ಅವರು ಎಲ್ಲಾ ಸಮಾಜಕ್ಕೆ, ಎಲ್ಲಾ ಧರ್ಮದವರಿಗೆ ಹಾಗೂ ಎಲ್ಲರಿಗೂ ಸೇರಿದ ಮಹಾನ್ ವ್ಯಕ್ತಿ. ಸರ್ಕಾರದ ಈ ದುಷ್ಕೃತ್ಯವನ್ನು ಖಂಡನೆ ಮಾಡಿ ಜನವರಿ 26ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರವನ್ನು ನಾನೇ ತಲೆಯಲ್ಲಿ ಹೊತ್ತುಕೊಂಡು ಮಂಗಳೂರಿನ ಕಂಕನಾಡಿ ಗರೋಡಿಯಿಂದ ಹೊರಟು ನಾರಾಯಣ ಗುರುಗಳು ಕಟ್ಟಿಸಿದ ಕುದ್ರೋಳಿ ದೇವಸ್ಥಾನದಲ್ಲಿ ಸೇರುತ್ತೇವೆ. ಈ ಮೆರವಣಿಗೆಯಲ್ಲಿ ಜಾತಿ, ಮತ,ಧರ್ಮ ಯಾವುದನ್ನೂ ಲೆಕ್ಕಿಸದೆ ಇದರಲ್ಲಿ ಭಾಗವಹಿಸಬೇಕು” ಎಂದು  ಅವರು ಹೇಳಿದ್ದಾರೆ.

ಅವಳಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳ ಆಯೋಜನೆಯಿಂದ ಜಿಲ್ಲೆಗಳ ಪ್ರತಿ ತಾಲೂಕುಗಳಲ್ಲಿ ಗುರುಗಳ ಟ್ಯಾಬ್ಲೊ ಆಯೋಜನೆ ಮಾಡಲಾಗಿದೆ. ಜನವರಿ 26 ರ ಸಂಜೆ ಕುದ್ರೋಳಿ ದೇವಸ್ಥಾನದಲ್ಲಿ ಸಮಾವೇಶ ನಡೆಸಿ, ಗುರುಗಳ ತತ್ವದಂತೆ ಸಂಘರ್ಷ ರಹಿತವಾಗಿ ನಾವು ನಮ್ಮ ಹಕ್ಕುಗಳನ್ನು ಮಂಡಿಸಲಿದ್ದೇವೆ. ಗುರುವಿಗಾದ ಅವಮಾನದ ವಿರುದ್ಧ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಸೆಟೆದು ನಿಲ್ಲೋಣ ಎಂದು ಸಮಾವೇಶದ ಪರವಾಗಿ ಹೊರಡಿಸಲಾಗಿರುವ ಪೋಸ್ಟರ್‌ ಹೇಳಿದೆ.

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿತ್ತು. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು, ದೇಶದಾದ್ಯಂತ ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇಶದಾದ್ಯಂತ ಈ ಬಗ್ಗೆ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಆದರೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಕಾರ್ಕಾಳ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರು ಒಕ್ಕೂಟ ಸರ್ಕಾರದ ಕ್ರಮವನ್ನು ಸಮರ್ಥಿಸುತ್ತಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರ ಸರ್ಕಾರ ಜನವರಿ 26 ಗಣರಾಜ್ಯೋತ್ಸವ ಸಮಾರಂಭದಲ್ಲಿ ಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ವನ್ನು ನಿರಾಕರಿಸಿ ರುವುದು, ಮನುವಾದಿ ಗಳು ಹಿಂದುಳಿದ ಸಮಾಜವನ್ನು ಕಡೆಗಣಿಸುವಂತಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...