Homeಮುಖಪುಟಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

ಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

- Advertisement -
- Advertisement -

ಮಣಿಪುರದ ಆರು ಜಿಲ್ಲೆಗಳಲ್ಲಿ ಒಟ್ಟು 104 ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಒಪ್ಪಿಸಿದ್ದಾರೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಬಂದೂಕುಗಳನ್ನು ತ್ಯಜಿಸಲು ಅಧಿಕಾರಿಗಳು ನೀಡಿದ ಏಳು ದಿನಗಳ ಅವಧಿ ಮುಗಿಯುವ ಒಂದು ದಿನ ಮೊದಲು, ಬುಧವಾರ ಕಾಂಗ್‌ಪೋಕ್ಪಿ, ಇಂಫಾಲ್ ಪೂರ್ವ, ಬಿಷ್ಣುಪುರ, ತೌಬಲ್, ಇಂಫಾಲ್ ಪಶ್ಚಿಮ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶರಣು ಮಾಡಲಾಗಿದೆ ಎಂದು ವರದಿಯಾಗಿದೆ.

ಫೆಬ್ರವರಿ 20ರಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು, ಜನರು ಏಳು ದಿನಗಳ ಒಳಗೆ ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಣೆಯಿಂದ ತಂದ ಒಪ್ಪಿಸಿ ಎಂದು ಮನವಿ ಮಾಡಿದ್ದರು. ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಬಯಸಿದರೆ ಸ್ವಯಂ ಪ್ರೇರಣೆಯಿಂದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ಏಳು ದಿನಗಳ ಸಮಯವಕಾಶ ಸಾಕು ಎಂದು ಮುಖ್ಯ ಕಾರ್ಯದರ್ಶಿ ಪಿ.ಕೆ. ಸಿಂಗ್ ಫೆಬ್ರವರಿ 23ರಂದು ಹೇಳಿದ್ದರು. ಅವಧಿ ಮುಗಿದ ನಂತರ ಅಂತಹ ಬಂದೂಕುಗಳನ್ನು ವಶಪಡಿಸಿಕೊಳ್ಳಲು ಪಡೆಗಳು ಕ್ರಮ ಕೈಗೊಳ್ಳುತ್ತವೆ ಎಂದು ತಿಳಿಸಿದ್ದರು.

ಮೇ 2023ರಿಂದ ಮಣಿಪುರದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಝೋ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆಗೆ ಕಾರಣವಾದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಫೆಬ್ರವರಿ 13ರಂದು ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ.

2027ರವರೆಗೆ ಇದ್ದ ಮಣಿಪುರ ವಿಧಾನಸಭೆಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಿಷೇಧಿತ ಸಂಘಟನೆಯ ಇಬ್ಬರ ಬಂಧನ

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ಇಬ್ಬರು ಸದಸ್ಯರನ್ನು ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಜಮೇಯಿ ಮಖಾ ಕಾಕ್ವಾ ಅಸೆಮ್ ಲೈಕೈಯಿಂದ ನಿಷೇಧಿತ ಸಜ್ಜು ಪ್ರೆಪಕ್ (ಪಿಆರ್‌ಒ)ನ ಕೇಡರ್ ಅನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಸಪಮ್ ಜೇಮ್ಸ್‌ಬಾಂಡ್ (25) ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕರು, ಸರ್ಕಾರಿ ಕಚೇರಿಗಳು, ಗಣ್ಯ ವ್ಯಕ್ತಿಗಳು, ಉದ್ಯಮಿಗಳು ಮತ್ತು ಅಂಗಡಿ ಮಾಲೀಕರಿಂದ ಸುಲಿಗೆ ಮತ್ತು ಹಣ ಸಂಗ್ರಹಿಸುವಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿಂದ ಎರಡು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಇಂಫಾಲ್ ಪಶ್ಚಿಮ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿಷೇಧಿತ ಕಾಂಗ್ಲೇ ಯಾವೋಲ್ ಕನ್ನಾ ಲುಪ್‌ನ ಸಕ್ರಿಯ ಸದಸ್ಯನನ್ನು ಬಂಧಿಸಿದ್ದಾರೆ.

ಈತನನ್ನು ಶಮ್ಜೇತ್ಸಾಬಮ್ ರೊಮಾನಂದ ಸಿಂಗ್ (23) ಎಂದು ಗುರುತಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...